ಬೆಂಗಳೂರು: ರಿಷಭ್ ಶೆಟ್ಟಿ ನಿರ್ದೇಶನ ಮತ್ತು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡ ಕಾಂತಾರ ಪ್ರಿಕ್ವೇಲ್ ಸಿನಿಮಾ ಚಿತ್ರಮಂದಿರದಲ್ಲಿ ಧೂಳೆಬ್ಬಿಸಿದೆ. ಒಂದೇ ವಾರದಲ್ಲಿ ₹500 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗಯತ್ತಿದೆ.
ಅ.2 ರಂದು ಕಾಂತಾರ ಚಿತ್ರ ವಿಶ್ವದಾದ್ಯಂತ 7 ಭಾಷೆಗಳಲ್ಲಿ ತೆರೆಕಂಡಿತ್ತು. ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಕಾಂತಾರಕ್ಕೆ ಅತ್ಯದ್ಭುತ ರೆಸ್ಪಾನ್ಸ್ ಸಿಗುತ್ತಿದ್ದು ವಿದೇಶದಲ್ಲೂ ಕಾಂತಾರ ಚಿತ್ರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪರಿಣಾಮ ಮೊದಲ ವಾರ ದಾಖಲೆಯ ಕಲೆಕ್ಷನ್ ಮಾಡಿದೆ.
ಕಾಂತಾರ ಅಧ್ಯಾಯ 1 ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಗಳಿಕೆ ವಿಚಾರದಲ್ಲಿ ಈತನಕ ಮೌನವಾಗಿದ್ದ ಕಾಂತಾರ ನಿರ್ಮಾಣ ಸಂಸ್ಥೆಯಾಗಿರುವ ಹೊಂಬಾಳೆ ಫಿಲಂಸ್ ಈಗ ಚಿತ್ರದ ಗಳಿಕೆ ಕುರಿತು ಅಧಿಕೃತ ಘೋಷಣೆ ಮಾಡಿದೆ. ಮೊದಲ ವಾರಕ್ಕೆ ಕಾಂತಾರ ಸಿನಿಮಾ ವಿಶ್ವದಾದ್ಯಂತ ₹ 509.25 ಕೋಟಿ ಕಲೆಕ್ಷನ್ ಮಾಡಿದೆ.
ಸಿನಿಮಾ ಬಿಡುಗಡೆಯಾದ ಮೊದಲ ವಾರದೊಳಗೆ ಕಾಂತಾರ ಚಿತ್ರ 500 ಕೋಟಿ ಗಡಿ ದಾಟುವ ಸುಳಿವು ನೀಡಿತ್ತು. ಇದೀಗ ನಿರೀಕ್ಷಿಸಿದಂತೆ ಕಾಂತಾರ ಸರಿಸುಮಾರು ₹ 510 ಕೋಟಿ ಬಾಕ್ಸಾಫೀಸ್ ಕಲೆಕ್ಷನ್ ಮಾಡಿದೆ.
ಕನ್ನಡದಲ್ಲಿ ಅತಿವೇಗದಲ್ಲಿ ಬಾಕ್ಸಾಫೀಸ್ ಕಲೆಕ್ಷನ್ ಮಾಡಿರುವ ಎರಡನೇ ಚಿತ್ರದ ಸ್ಥಾನದಲ್ಲಿದೆ ಕಾಂತಾರ. ಕೆಜಿಎಫ್ 2 ಚಿತ್ರ ಮೊದಲ ಸ್ಥಾನದಲ್ಲಿದೆ. ಕೆಜಿಎಫ್2 ಒಟ್ಟು 1,215 ಕಲೆಕ್ಷನ್ ಮಾಡಿತ್ತು. ಆ ದಾಖಲೆಯನ್ನು ಕಾಂತಾರ ಮುರಿಯಲಿದೆಯೇ ಕಾದು ನೋಡಬೇಕಿದೆ.