ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಇದೀಗ ಬಾಲಿವುಡ್ ನಲ್ಲಿ ಬಿಡುಗಡೆಯಾಗುತ್ತಿದೆ.
ಹಿಂದಿ ಭಾಷೆಯಲ್ಲಿ ಕಾಂತಾರ ಅಕ್ಟೋಬರ್ 14 ರಂದು ಬಿಡುಗಡೆಯಾಗಲಿದೆ. ಸುಮಾರು 2,500 ಸ್ಕ್ರೀನ್ ಗಳಲ್ಲಿ ಕಾಂತಾರ ಹಿಂದಿ ವರ್ಷನ್ ಬಿಡುಗಡೆಯಾಗುತ್ತಿರುವುದು ವಿಶೇಷ.
ಇದಕ್ಕೂ ಮೊದಲು ಮುಂಬೈನಲ್ಲಿ ಕನ್ನಡ ಭಾಷೆಯಲ್ಲೇ ಕಾಂತಾರ ಬಿಡುಗಡೆಯಾಗಿ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಿಗೂ ಡಬ್ ಆಗಿ ಬಿಡುಗಡೆಯಾಗುತ್ತಿದೆ.
-Edited by Rajesh Patil