ದರ್ಶನ್‌ ಬ್ರ್ಯಾಂಡ್‌ ಮೌಲ್ಯ ಹೆಚ್ಚಿಸಿದ್ದ ಕರಿಯ ಚಿತ್ರ ಮತ್ತೆ ತೆರೆಗೆ: ಅತಿರೇಕ ಮಾಡಬೇಡಿ ಎಂದ ಪ್ರೇಮ್‌

Sampriya
ಭಾನುವಾರ, 25 ಆಗಸ್ಟ್ 2024 (13:37 IST)
Photo Courtesy X
ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಚಿತ್ರರಂಗದಲ್ಲಿ ಹೊಸ ಇಮೇಜ್‌ ಅನ್ನು ನೀಡಿದ್ದ ಕರಿಯ ಸಿನಿಮಾ ಆಗಸ್ಟ್‌ 30ರಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಬಿಡುಗಡೆಯಾಗಲಿದೆ.

ಈ ಕುರಿತು ಚಿತ್ರದ ನಿರ್ದೇಶಕ ಪ್ರೇಮ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡು ಈ ಮಾಹಿತಿ ನೀಡಿದ್ದಾರೆ. ದರ್ಶನ್‌ ಮತ್ತು ಅಭಿನಯಶ್ರೀ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವು ಸೂಪರ್ ಹಿಟ್‌ ಆಗಿತ್ತು. ಭೂಗತ ಲೋಕದ ಚಿತ್ರಕಥೆಯನ್ನು ಹೊಂದಿರುವ ಈ ಸಿನಿಮಾದ ಬಳಿಕ ದರ್ಶನ್‌ ಅವರ ಬ್ರ್ಯಾಂಡ್‌ ಮೌಲ್ಯವೂ ಜಾಸ್ತಿಯಾಗಿತ್ತು.

ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು ನಿಮ್ಮಿಂದ. ಅಭಿಮಾನಿಗಳು ಶಾಂತಿ, ತಾಳ್ಮೆ ಹಾಗೂ ಪ್ರೀತಿಯಿಂದ ಕರಿಯನನ್ನು ಹರಸಿ ಹಾರೈಸಿ. ಯಾವುದೇ ಅತಿರೇಕಗಳನ್ನು ಮಾಡಬೇಡಿ. ನಿಮ್ಮ ಆನ್‌ಲೈನ್‌ ಬರವಣಿಗೆಗಳು ಬೇರೆಯವರಿಗೆ ನೋವು ತರದಿರಲಿ. ದರ್ಶನ್‌ ಅವರು ಕಾನೂನು ಮುಕ್ತರಾಗಿ ಆದಷ್ಟು ಬೇಗ ಹೊರಗೆ ಬಂದು ನಿಮ್ಮ, ನಮ್ಮ ಜೊತೆ ಬೆರೆಯಲಿ, ಬೆಳಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಲ್ಲರಿಗೂ ಒಳ್ಳೆಯದಾಗಲಿ ಎಂದು ನಿರ್ದೇಶಕ ಪ್ರೇಮ್‌ ಬರೆದುಕೊಂಡಿದ್ದಾರೆ.

ಚಿತ್ರದುರ್ಗಾದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆಗಸ್ಟ್‌ 28ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ
Show comments