ಬೆಂಗಳೂರು: ಹಿರಿಯ ನಟಿ, ಪಂಚಭಾಷಾ ತಾರೆ, ಈಚೆಗೆ ವಿಧಿವಶರಾದ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಅಭಿನಯ ಸರಸ್ವತಿ ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಕನ್ನಡದವರಾಗಿರುವ ನಟಿ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ ದಿವಂಗತ ಬಿ.ಸರೋಜಾದೇವಿ ಅವರು ಪಂಚಭಾಷೆಗಳಲ್ಲಿ ಅಭಿನಯಿಸಿದ್ದಾರೆ. ಭಾರತೀಯ ಸಿನಿಮಾ ಹಾಗೂ ಕನ್ನಡ ಸಿನಿಮಾ ರಂಗಕ್ಕೆ ಅವರ ಕೊಡುಗೆ ಅಪಾರವಾಗಿದೆ.
ಅದನ್ನು ಪರಿಗಣಿಸಿಇದೀಗ ರಾಜ್ಯ ಸರ್ಕಾರ “ಅಭಿನಯ ಸರಸ್ಕೃತಿ” ಬಿರುದಿನ ಹೆಸರಿನಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುವುದು.
ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಲಾಗಿದೆ