ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ದೇಶಕರಾದ ಕಾಶಿನಾಥ್ ಅವರು ಗುರುವಾರ(ಇಂದು) ಬೆಳಿಗ್ಗೆ ಶ್ರೀಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕನ್ನಡ ಚಿತ್ರರಂಗದ ಪಾಲಿಗೆ ಇಂದು ಕರಾಳ ದಿನವಾಗಿದೆ.
									
			
			 
 			
 
 			
					
			        							
								
																	 
ಕಾಶಿನಾಥ ಅವರು ಕಳೆದ 2 ದಿನಗಳ ಹಿಂದೆ ಶ್ರೀಶಂಕರ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು  ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ. ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕೂಡ ಕೇಳಿಬರುತ್ತಿದೆ. ಕುಂದಾಪುರದ ಸಮೀಪದ ಕೋಟೇಶ್ವರದಲ್ಲಿ ಜನಿಸಿದ ಇವರು, ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ್ದರು. ಇಂದು ಅವರು ನಿಧನದ ಹೊಂದಿದ  ಈ ಸುದ್ದಿ ಅವರ ಅಭಿಮಾನಿಗಳಲ್ಲಿ ಪಾಲಿಗೆ ಕಹಿ ಸುದ್ದಿಯಾಗಿದೆ. ಇವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ದೇಶಿಸಿ ನಟಿಸಿದ್ದರು. ಇತ್ತಿಚೆಗಷ್ಟೇ ಚೌಕ ಚಿತ್ರದಲ್ಲಿ ನಟಿಸಿದ್ದರು.
									
										
								
																	
ಹೊಸ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಅವಕಾಶ ನೀಡುತ್ತಾ ಉಪೇಂದ್ರ, ವಿ ಮನೋಹರ್, ಸುನೀಲ್ ಕುಮಾರ್ ದೇಸಾಯಿ ಹೀಗೆ ಇನ್ನೂ ಅನೇಕರನ್ನ ಚಿತ್ರರಂಗಕ್ಕೆ ಪರಿಚಯಿಸಿದ ಕೀರ್ತಿ ಕಾಶಿನಾಥ್ ಅವರಿಗೆ ಸಲ್ಲುತ್ತದೆ.
									
											
							                     
							
							
			        							
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ