Webdunia - Bharat's app for daily news and videos

Install App

ಮಲಯಾಳಂನಂತೆ ತೆಲುಗಿನಲ್ಲೂ ಮಿಟೂ ಕೇಸ್: ಸಮಂತಾ ಋತು ಪ್ರಭು ಮಾತಿನ ಮರ್ಮವೇನು

Sampriya
ಶನಿವಾರ, 31 ಆಗಸ್ಟ್ 2024 (16:52 IST)
Photo Courtesy X
ಆಂಧ್ರಪ್ರದೇಶ:  ಕೇರಳ ಸರ್ಕಾರ ಬಿಡುಗಡೆ ಮಾಡಿದ ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ವರದಿಯನ್ನು ನಟಿ ಸಮಂತಾ ರುತ್ ಪ್ರಭು ಅವರು ಶ್ಲಾಘಿಸಿದ್ದಾರೆ.

ಅದಲ್ಲದೆ ತೆಲುಗು ಚಲನಚಿತ್ರೋದ್ಯಮದಲ್ಲಿರುವ ಲೈಂಗಿಕ ಕಿರುಕುಳದ ಬಗ್ಗೆ ಇದೇ ರೀತಿಯ ವರದಿಯನ್ನು ಪ್ರಕಟಿಸಲು ತೆಲಂಗಾಣ ಸರ್ಕಾರ ಮುಂದಾಗಬೇಕೆಂದು ಸಮಂತಾ ಒತ್ತಾಯಿಸಿದ್ದಾರೆ. ತೆಲಂಗಾಣ ಸರ್ಕಾರ ಕೇರಳ ಮಾದರಿಯ ಸಮಿತಿಯನ್ನು ರಚಿಸಿದರೆ ಟಾಲಿವುಡ್‌ಗೆ ಹೆಚ್ಚಿನ ಲಾಭವಾಗಲಿದೆ. ಇದರಿಂದ ಮಹಿಳೆಯರು ತಾವು ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತೆಯನ್ನು ಮತ್ತಷ್ಟು ನೀಡುತ್ತದೆ  ಎಂದು ಸಮಂತಾ ಹೇಳಿದ್ದಾರೆ.

"ನಾವು, ತೆಲುಗು ಚಿತ್ರರಂಗದ ಮಹಿಳೆಯರು, ಹೇಮಾ ಸಮಿತಿಯ ವರದಿಯನ್ನು ಸ್ವಾಗತಿಸುತ್ತೇವೆ ಮತ್ತು ಕೇರಳದ ಡಬ್ಲ್ಯುಸಿಸಿಯ ನಿರಂತರ ಪ್ರಯತ್ನಗಳನ್ನು ಶ್ಲಾಘಿಸುತ್ತೇವೆ" ಎಂದು ಸಮಂತಾ ಇನ್‌ಸ್ಟಾಗ್ರಾಂನ ಸ್ಟೋರಿಯಲ್ಲಿ ತಿಳಿಸಿದ್ದಾರೆ.

"ಟಿಎಫ್‌ಐ (ತೆಲುಗು ಚಲನಚಿತ್ರೋದ್ಯಮ)ದಲ್ಲಿ ಮಹಿಳೆಯರಿಗೆ ಸುರಕ್ಷಿತ ಕೆಲಸದ ವಾತಾವರಣವನ್ನು ಸ್ಥಾಪಿಸಲು ಸರ್ಕಾರ ಮತ್ತು ಉದ್ಯಮದ ನೀತಿಗಳನ್ನು ರೂಪಿಸಲು ಸಹಾಯ ಮಾಡುವ ಲೈಂಗಿಕ ಕಿರುಕುಳದ ಕುರಿತು ಸಲ್ಲಿಸಿದ ಉಪ ಸಮಿತಿಯ ವರದಿಯನ್ನು ಪ್ರಕಟಿಸಲು ನಾವು ತೆಲಂಗಾಣ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತೇವೆ" ಎಂದು ಅವರು ಹೇಳಿದರು.

ಸದ್ಯ ಮಲಯಾಳಂ ಚಿತ್ರರಂಗದಲ್ಲಿ ಬಿಡುಗಡೆಯಾದ ಹೇಮಾ ಸಮಿತಿ ವರದಿಯಿಂದ ಅನೇಕ ನಟ, ನಿರ್ದೇಶಕರ ಮೇಲೆ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ, ಅದಲ್ಲದೆ ಪ್ರಕರಣ ದಾಖಲಿಸಲಾಗಿದೆ. ಇದು ಒಳ್ಳೆಯ ಎಂದು ಅನೇಕ ನಟಿಯರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಮಂತಾ ಅವರು ಹೇಮಾ ಸಮಿತಿ ವರದಿಯ ಹಾಗೇ ತೆಲುಗು ಚಿತ್ರರಂಗದಲ್ಲೂ ಇದೇ ರೀತಿಯ ವರದಿಯನ್ನು ಪ್ರಕಟಿಸಬೇಕೆಂದು ಒತ್ತಾಯಿಸಿದ್ದಾರೆ.

ತ್ರಿಸದಸ್ಯ ನ್ಯಾಯಮೂರ್ತಿ ಹೇಮಾ ಸಮಿತಿಯನ್ನು 2017 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿತು ಮತ್ತು 2019 ರಲ್ಲಿ ತನ್ನ ವರದಿಯನ್ನು ಸಲ್ಲಿಸಿತು. ಅದರ ಬಿಡುಗಡೆಗೆ ಕಾನೂನು ಸವಾಲುಗಳ ಕಾರಣ ವರದಿಯನ್ನು ಇದುವರೆಗೆ ಸಾರ್ವಜನಿಕಗೊಳಿಸಲಾಗಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ