ಅತ್ಯಾಚಾರ ಪ್ರಕರಣದಲ್ಲಿ ನಟ ನಿವಿನ್‌ ಪೋಳಿಗೆ ಕ್ಲೀನ್‌ಚಿಟ್‌ ನೀಡಿದ ಕೇರಳ ಪೊಲೀಸರು

Sampriya
ಬುಧವಾರ, 6 ನವೆಂಬರ್ 2024 (18:48 IST)
Photo Courtesy X
ಕೊಚ್ಚಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ಮಲಯಾಳಂನ ಖ್ಯಾತ ನಟ ನಿವಿನ್‌ ಪೋಳಿ ಅವರು ತಪ್ಪಿತಸ್ಥರಲ್ಲ ಎಂದು ಕೇರಳ ಪೊಲೀಸರು ಬುಧವಾರ ಸ್ಪಷ್ಟಪಡಿಸಿದ್ದಾರೆ

ನಟ ನಿವಿನ್‌ ಪೋಳಿ ವರ್ಷದ ಹಿಂದೆ ದುಬೈನಲ್ಲಿ ನಿವಿನ್‌ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ದೂರಿದ್ದರು. ಮಹಿಳೆ ನೀಡಿದ ದೂರು ಆಧರಿಸಿ ಅವರ ವಿರುದ್ಧ ಕೇರಳ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಇತ್ತೀಚಿಗಷ್ಟೇ ಸ್ಥಳೀಯ ನ್ಯಾಯಾಲಯಕ್ಕೆ ನಿವಿನ್‌ ಅವರ ಹೆಸರು ಹೊರತುಪಡಿಸಿ ಉಳಿದ ಆರೋಪಿಗಳ ಹೆಸರಿರುವ ವರದಿಯನ್ನು ಸಲ್ಲಿಸಿದ್ದರು. ತನಿಖೆಯ ವೇಳೆ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎನ್ನಲಾದ ಸ್ಥಳದಲ್ಲಿ ಮತ್ತು ಆ ಸಮಯದಲ್ಲಿ ನಿವಿನ್‌ ಇರಲಿಲ್ಲ ಎನ್ನುವುದು ತನಿಖೆಯ ವೇಳೆ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿವಿನ್‌ ಅವರ ಪಾಸ್‌ಪೋರ್ಟ್‌, ಕ್ರೆಡಿಟ್‌ ಕಾರ್ಡ್‌ಗಳ ವ್ಯವಹಾರ ಸೇರಿದಂತೆ ಪ್ರಯಾಣದ ದಾಖಲೆಗಳನ್ನು ನಾವು ಪರಿಶೀಲಿಸಿದ್ದೇವೆ. ಆದರೆ ದೂರಿನಲ್ಲಿ ಇರುವ ಮಾಹಿತಿಗೂ ದಾಖಲೆಗಳಿಗೂ ಹೋಲಿಕೆಯಾಗುತ್ತಿಲ್ಲ. ಘಟನೆ ನಡೆಯುವ ವೇಳೆ ನಿವಿನ್‌ ಸ್ಥಳದಲ್ಲಿದ್ದರು ಎನ್ನುವುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ