ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

Sampriya
ಮಂಗಳವಾರ, 6 ಮೇ 2025 (19:55 IST)
Photo Credit X
ಬೆಂಗಳೂರು:  ಕನ್ನಡ ಹಾಡಿನ ಬೇಡಿಕೆ ಇಟ್ಟಿದ್ದಕ್ಕೆ ಕನ್ನಡಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಟ್ಟ ವಿವಾದಕ್ಕೆ ಕಾರಣವಾಗಿದ್ದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಲಾಗಿದೆ,

ಇದರ ಬೆನ್ನಲ್ಲೇ ಇನ್ಸ್ಟಾ ಗ್ರಾಂನಲ್ಲಿ Sorry Karnataka ನಿಮ್ಮ ಮೇಲಿರುವ ನನ್ನ ಪ್ರೀತಿ ನನ್ನ ಅಹಂಕಾರಕ್ಕಿಂತ ದೊಡ್ಡದು. ನಿಮ್ಮನ್ನ ಸದಾ ಪ್ರೀತಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದರು.

ಈ ಪೋಸ್ಟ್ ಗೆ ‘ಗಿಣಿರಾಮ’ ನಟಿ ನಯನ ನಾಗರಾಜ್‌ ಮಾಡಿರುವ ಕಾಮೆಂಟ್‌ ಇದೀಗ ಕನ್ನಡಗರಲ್ಲಿ ಬೇಸರ ಮೂಡಿಸಿದೆ.

ನಟಿ ನಯನ ನಾಗರಾಜ್‌, ‘’ಲವ್ ಯು.. ನಿಮ್ಮನ್ನು ಬ್ಯಾನ್ ಮಾಡಿದರೆ ಅದು ಕೆಎಫ್‌ಐಗೆ ನಷ್ಟ’’ ಎಂದು ಕಾಮೆಂಟ್ ಮಾಡಿದ್ದಾರೆ. ನಯನ ನಾಗರಾಜ್‌ ಮಾಡಿರುವ ಕಾಮೆಂಟ್‌ಗೆ ಅನೇಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಒಬ್ಬರು ಕರ್ನಾಟಕದಲ್ಲೇ ಒಳ್ಳೆ ಒಳ್ಳೆ ಸಿಂಗರ್ ಇದ್ದಾರೆ ಬಿಡಿ. ನೋಡ್ಕೊಂಡು ಸಪೋರ್ಟ್ ಮಾಡಿ ನಯನ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕನ್ನಡ ಚಿತ್ರೋದ್ಯಮದಲ್ಲಿ ಹಲವಾರು ಕಲಾವಿದರಿಂದ ಸಮೃದ್ಧವಾಗಿದೆ. ಯಾರೋ ಒಬ್ಬರಿಂದ ನಮ್ಮ ಇಂಡಸ್ಟ್ರೀ ಹಾಳಾಗುವುದಿಲ್ಲ ಎಂದು ಕಮೆಂಟ್‌ ಮಾಡಿದ್ದಾರೆ. ಕನ್ನಡ ಸೀರಿಯಲ್ ನಟಿ ನಯನ ಹೇಳಿಕೆಯಿಂದ ನೆಟ್ಟಿಗರಂತೂ ಫುಲ್ ಗರಂ ಆಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments