Select Your Language

Notifications

webdunia
webdunia
webdunia
webdunia

ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಕೆಜಿಎಫ್ 2!

ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಕೆಜಿಎಫ್ 2!
ಬೆಂಗಳೂರು , ಮಂಗಳವಾರ, 22 ಫೆಬ್ರವರಿ 2022 (09:00 IST)
ಬೆಂಗಳೂರು: ಕನ್ನಡ ಚಿತ್ರರಂಗವನ್ನು ದೇಶವೇ ತಿರುಗಿ ನೋಡುವಂತೆ ಮಾಡಿದ ಕೆಜಿಎಫ್ ಸಿನಿಮಾ ಈಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ಹೊರಟಿದೆ.

ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಕೆಜಿಎಫ್ 2 ಸಿನಿಮಾ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.

ಹೊಂಬಾಳೆ ಫಿಲಂಸ್ ನಿರ್ಮಿಸಿರುವ ಪ್ರಶಾಂತ್ ನೀಲ್ ನಿರ್ದೇಶನದ ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಕೆಜಿಎಫ್ 2 ಏಪ್ರಿಲ್ 14 ರಂದು ಬಿಡುಗಡೆಯಾಗಲಿದೆ. ಇದು ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ಈಗ ಹಾಲಿವುಡ್ ನಲ್ಲೂ ಬಿಡುಗಡೆಯಾಗಲಿದೆ ಎಂಬ ಸುದ್ದಿಯಿದೆ. ಇದು ಕನ್ನಡ ಚಿತ್ರದ ಮಟ್ಟಿಗೆ ಹೆಗ್ಗಳಿಕೆಯೇ ಸರಿ.

Share this Story:

Follow Webdunia kannada

ಮುಂದಿನ ಸುದ್ದಿ

ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್!