Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
ಬೆಂಗಳೂರು , ಗುರುವಾರ, 24 ಜೂನ್ 2021 (09:20 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಮತ್ತೊಂದು ಮುಹೂರ್ತ ಫಿಕ್ಸ್ ಆಗಿದೆ. ಸಿನಿಮಾ ಬಿಡುಗಡೆ ದಿನಾಂಕ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.


ಎಲ್ಲಾ ಸರಿ ಹೋಗಿದ್ದರೆ ಜುಲೈನಲ್ಲೇ ಸಿನಿಮಾ ಬಿಡುಗಡೆಯಾಗಬೇಕಿತ್ತು. ಈ ಬಗ್ಗೆ ಚಿತ್ರತಂಡವೂ ಅಧಿಕೃತ ಪ್ರಕಟಣೆ ಹೊರಹಾಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಲೆಕ್ಕಾಚಾರ ತಲೆಕೆಳಗಾಯಿತು.

ಮೂಲಗಳ ಪ್ರಕಾರ ಥಿಯೇಟರ್ ಶೇ.100 ರಷ್ಟು ತೆರೆಯಲು ಅವಕಾಶ ಸಿಕ್ಕರೆ ಮತ್ತು ಕೊರೋನಾ ಮೂರನೇ ಅಲೆ ಇಲ್ಲದೇ ಇದ್ದರೆ ಕೆಜಿಎಫ್ 2 ಸಿನಿಮಾ ಸೆಪ್ಟೆಂಬರ್ 9 ರಂದು ಥಿಯೇಟರ್ ಗೆ ಬರಲಿದೆ. ಈ ಸಿನಿಮಾದ ಒಟಿಟಿ ಹಕ್ಕಿಗಾಗಿ ಅಮೆಝೋನ್ ಪ್ರೈಮ್ ಜೊತೆ ಮಾತುಕತೆ ನಡೆಯುತ್ತಿದೆ ಎಂಬ ಸುದ್ದಿಯಿದೆ. ಈ ಸುದ್ದಿ ತಿಳಿಯುತ್ತಲೇ ಅಭಿಮಾನಿಗಳು ಖುಷಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಚಾರಿ ವಿಜಯ್ ಬಗ್ಗೆ ಅಪಪ್ರಚಾರ: ಸಹೋದರನ ಸ್ಪಷ್ಟನೆ