ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಚಿತ್ರತಂಡದಿಂದ ಅಪ್ ಡೇಟ್ ಸಿಗುತ್ತದೆಯೇ ಎಂದು ಅಭಿಮಾನಿಗಳು ಕಾಯುತ್ತಲೇ ಇದ್ದಾರೆ.
ಇದಕ್ಕೆ ತಕ್ಕಂತೆ ಇತ್ತೀಚೆಗೆ ನಾಯಕ ರಾಕಿಂಗ್ ಸ್ಟಾರ್ ಯಶ್ ಮುಂಬೈನಲ್ಲಿ ಚಿತ್ರದ ಪ್ರಚಾರ ಕೆಲಸ ಸಂಬಂಧವಾಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಸಿನಿಮಾದ ಹಾಡೊಂದರ ಬಿಡುಗಡೆ ಬಗ್ಗೆ ಸುದ್ದಿ ಕೇಳಿಬರುತ್ತಿದೆ.
ಕೆಜಿಎಫ್ 2 ಸಿನಿಮಾದ ಮೆಹಬೂಬಾ ಎನ್ನುವ ಹಾಡೊಂದು ಫೆಬ್ರವರಿ ಕೊನೆ ವಾರದಲ್ಲಿ ಲಾಂಚ್ ಆಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಏಪ್ರಿಲ್ 14 ರಂದು ಸಿನಿಮಾ ಬಿಡುಗಡೆಯಾಗಲಿದೆ.