ಕೆಜಿಎಫ್ 2 ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇಲ್ಲ

Webdunia
ಮಂಗಳವಾರ, 21 ಏಪ್ರಿಲ್ 2020 (09:20 IST)
ಬೆಂಗಳೂರು: ಕೊರೋನಾದಿಂದಾಗಿ ಚಿತ್ರರಂಗವೇ ಸ್ತಬ್ಧವಾಗಿ ಕುಳಿತಿದೆ. ಈ ಲಾಕ್ ಡೌನ್ ಇಫೆಕ್ಟ್ ಎಷ್ಟೋ ಚಿತ್ರಗಳ ರಿಲೀಸ್ ಮೇಲೆ ಪ್ರಭಾವ ಬೀರಲಿದೆ. ಕೆಜಿಎಫ್ 2 ಕೂಡಾ ಇದೇ ಕಾರಣಕ್ಕೆ ಲೇಟ್ ಆಗಬಹುದಾ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.


ಅಕ್ಟೋಬರ್ ನಲ್ಲಿ ಈ ವರ್ಷದ ದಸರಾಗೆ ಕೆಜಿಎಫ್ 2 ಸಿನಿಮಾ ಬಿಡುಗಡೆ ಮಾಡುವುದಾಗಿ ಈಗಾಗಲೇ ಚಿತ್ರತಂಡ ‍ಘೋಷಿಸಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಇದುವರೆಗೆ ಟೀಸರ್ ಕೂಡಾ ಹೊರಬಿಟ್ಟಿಲ್ಲ. ಚಿತ್ರದ ಕೆಲಸಗಳೂ ಬಾಕಿಯಿವೆ. ಹೀಗಾಗಿ ಬಿಡುಗಡೆ ದಿನಾಂಕ ಮುಂದೂಡಿಕೆಯಾಗಬಹುದಾ ಎಂಬ ಅನುಮಾನ ಅಭಿಮಾನಿಗಳಿಗಿತ್ತು. ಇದಕ್ಕೀಗ ನಿರ್ಮಾಪಕ ಕಾರ್ತಿಕ್ ಗೌಡ ಉತ್ತರಿಸಿದ್ದಾರೆ.

ಇನ್ ಸ್ಟಾಗ್ರಾಂ ಚ್ಯಾಟ್ ನಲ್ಲಿ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿರುವ ಕಾರ್ತಿಕ್ ಗೌಡ ಚಿತ್ರ ಬಿಡುಗಡೆ ದಿನಾಂಕ ಮುಂದೆ ಹೋಗಿಲ್ಲ. ನಿಗದಿಯಾದ ದಿನವೇ ಬಿಡುಗಡೆಯಾಗಲಿದೆ ಎಂದಿದ್ದಾರೆ. ಚಿತ್ರೀಕರಣ ಶೇ.80 ರಷ್ಟು ಪೂರ್ತಿಯಾಗಿದೆ. ಇನ್ನು 20 ಶೇಕಡಾ ಕೆಲಸಗಳಷ್ಟೇ ಬಾಕಿಯಿವೆ. ಲಾಕ್ ಡೌನ್ ಮುಗಿದ ಕೂಡಲೇ ಅದನ್ನು ಮಾಡಿ ಮುಗಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಮುಂದಿನ ಸುದ್ದಿ
Show comments