ಬೆಂಗಳೂರು: ಕನ್ನಡ ಚಿತ್ರರಂಗವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಕೆಜಿಎಫ್ ಚಾಪ್ಟರ್ 1 ಸಿನಿಮಾ ಬಿಡುಗಡೆಯಾಗಿ ಇಂದಿಗೆ ಮೂರು ವರ್ಷವಾಗಿದೆ.
ಈ ದಿನವನ್ನು ಟ್ವಿಟರ್ ನಲ್ಲಿ ಟ್ರೆಂಡ್ ಮಾಡುವ ಮೂಲಕ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಪಾಲಿಗೆ ಹಲವು ದಾಖಲೆ ಮಾಡಿದ್ದ ಈ ಪ್ಯಾನ್ ಇಂಡಿಯಾ ಸಿನಿಮಾ ಮೂಲಕ ಯಶ್ ನ್ಯಾಷನಲ್ ಸ್ಟಾರ್ ಆದರು.
ಇದೀಗ ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಮುಂದಿನ ವರ್ಷ ಏಪ್ರಿಲ್ 14 ರಂದು ಚಿತ್ರ ತೆರೆಗೆ ಬರಲಿದೆ. ಇದುವರೆಗೆ ಚಿತ್ರತಂಡ ಟೀಸರ್ ಬಿಟ್ಟು ಯಾವುದೇ ಅಪ್ ಡೇಟ್ ಕೊಟ್ಟಿಲ್ಲ. ಹಾಗಿದ್ದರೂ ಕೆಜಿಎಫ್ ಸಿನಿಮಾದ ಕ್ರೇಜ್ ಎಲ್ಲಾ ಭಾಷೆಗಳಲ್ಲೂ ಉನ್ನತ ಮಟ್ಟದಲ್ಲೇ ಇದೆ.