Webdunia - Bharat's app for daily news and videos

Install App

ಕೆಜಿಎಫ್ ಸಿನಿಮಾ ಕಲೆಕ್ಷನ್ ಬಗ್ಗೆ ಇದುವರೆಗೆ ಬಂದ ಯಾವ ಸುದ್ದಿಯನ್ನೂ ನಂಬಬೇಡಿ!

Webdunia
ಬುಧವಾರ, 16 ಜನವರಿ 2019 (10:12 IST)
ಬೆಂಗಳೂರು: ಕೆಜಿಎಫ್ ಸಿನಿಮಾ ವಿಶ್ವದಾದ್ಯಂತ ಸ್ಯಾಂಡಲ್ ವುಡ್ ಸಿನಿಮಾವನ್ನು ಬೇರೆ ಲೆವೆಲ್ ಗೆ ಕರೆದೊಯ್ದ ಸಿನಿಮಾ. ಈ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್ ನಲ್ಲಿ 200 ಕೋಟಿ ದಾಟಿದೆ ಎಂಬ ಸುದ್ದಿ ಬಂದಿತ್ತು.


ಆದರೆ ಕಲೆಕ್ಷನ್ ವಿಚಾರವಾಗಿ ಹರಿದುಬರುತ್ತಿರುವ ಯಾವುದೇ ಸುದ್ದಿಗಳೂ ಅಧಿಕೃತವಲ್ಲ. ನಿಜವಾಗಿ ಎಷ್ಟು ಕಲೆಕ್ಷನ್ ಮಾಡಿದೆ ಎಂದು ಗೊತ್ತಾಗಲು ಒಂದು ತಿಂಗಳು ಕಾಯಿರಿ ಎಂದು ಸ್ವತಃ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರ್ ಸ್ಪಷ್ಟನೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ತಮ್ಮ ಟೀಂ ಜತೆಗೆ ಮಾತನಾಡಿರುವ ವಿಜಯ್ ಕಿರಗಂದೂರು ಕಲೆಕ್ಷನ್ ಬಗ್ಗೆ ನಮ್ಮ ತಂಡ ಇದುವರೆಗೆ ಯಾವುದೇ ಹೇಳಿಕೆ ಕೊಟ್ಟಿಲ್ಲ. ಈ ಬಗ್ಗೆ ಆನ್ ಲೈನ್ ನಲ್ಲಿ ಬರುತ್ತಿರುವ ಸುದ್ದಿಗಳಿಗೆ ನಾವು ಜವಾಬ್ಧಾರರಲ್ಲ. ಆದರೆ ನಮ್ಮ ದೇಶದಲ್ಲಿ ಮಾತ್ರವಲ್ಲದೆ, ಪಾಕಿಸ್ತಾನವೂ ಸೇರಿದಂತೆ ಬಿಡುಗಡೆಯಾದ ಎಲ್ಲಾ ರಾಷ್ಟ್ರಗಳಲ್ಲೂ ಉತ್ತಮ ಪ್ರದರ್ಶನ ಕಂಡಿದೆ. ಸರಿಯಾದ ಲೆಕ್ಕ ಒಂದು ತಿಂಗಳ ನಂತರ ಕೊಡುತ್ತೇನೆ ಎಂದು ನಿರ್ಮಾಪಕರು ಹೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಚಿತ್ರತಂಡವೇ ಉಪಸ್ಥಿತಿಯಿತ್ತು. ಕೆಜಿಎಫ್ ಚಾಪ್ಟರ್ 1 ರ ಯಶಸ್ಸಿನ ಬಳಿಕ ಇದೀಗ ಚಿತ್ರತಂಡ ಎರಡನೇ ಭಾಗದ ಚಿತ್ರೀಕರಣದತ್ತ ಗಮನಹರಿಸಿದ್ದು, ಈ ಭಾಗದಲ್ಲಿ ನಾಯಕಿ ಶ್ರೀನಿಧಿ ಶೆಟ್ಟಿಗೂ ಮಹತ್ವದ ಪಾತ್ರವಿದೆ ಎಂಬ ಸುಳಿವು ಬಿಟ್ಟುಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments