Publish Date: Tue, 15 Jan 2019 (09:00 IST)
Updated Date: Tue, 15 Jan 2019 (09:01 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಪಾಕಿಸ್ತಾನದಲ್ಲೂ ಬಿಡುಗಡೆಯಾಗಿ ಇತಿಹಾಸ ನಿರ್ಮಿಸಿದೆ. ಇಲ್ಲೂ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ಕೇಳಿಬರುತ್ತಿದೆ.
ಇದೀಗ ಪಾಕ್ ನಲ್ಲಿ ಬಿಡುಗಡೆಯಾದ ಮೊದಲ ಸ್ಯಾಂಡಲ್ ವುಡ್ ಸಿನಿಮಾ ಎಂಬ ದಾಖಲೆ ಮಾಡಿರುವ ಕೆಜಿಎಫ್ ಮತ್ತೊಂದು ಗರಿ ತಲೆಗೇರಿಸಿಕೊಂಡಿದೆ.
ಪಾಕ್ ಬಾಕ್ಸ್ ಆಫೀಸ್ ನಲ್ಲಿ ಕೆಜಿಎಫ್ ಉತ್ತಮ ಗಳಿಕೆ ಮಾಡುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ನಿರ್ದಿಷ್ಟವಾಗಿ ಇದುವರೆಗೆ ಕೆಜಿಎಫ್ ಪಾಕಿಸ್ತಾನದಲ್ಲಿ ಎಷ್ಟು ಗಳಿಕೆ ಮಾಡಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಹಿಂದಿ ಭಾಷೆಯಲ್ಲಿ ಬಿಡುಗಡೆಯಾದ ಕೆಜಿಎಫ್ ಪಾಕಿಸ್ತಾನದಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿರುವ ಸುದ್ದಿ ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ