Publish Date: Sun, 07 Nov 2021 (09:16 IST)
Updated Date: Sun, 07 Nov 2021 (09:17 IST)
ಬೆಂಗಳೂರು: ಜೀ ಕನ್ನಡ ವಾಹಿನಿಯ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಕಿಚ್ಚ ಸುದೀಪ್ ಬಿಗ್ ಅನೌನ್ಸ್ ಮೆಂಟ್ ಮಾಡಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಸಿನಿಮಾ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ ಸುದೀಪ್ ಸಂಭಾವ್ಯ ದಿನಾಂಕ ಹೇಳಿದ್ದಾರೆ.
ಜನವರಿಯಲ್ಲಿ ಸಿನಿಮಾ ಬಿಡುಗಡೆಯಾಗಬಹುದು ಎಂದು ಸುದೀಪ್ ಹೇಳಿದ್ದಾರೆ. ಜನವರಿ ಕಿಚ್ಚನ ಪಾಲಿಗೆ ವಿಶೇಷ ತಿಂಗಳು. ಇದೇ ತಿಂಗಳು ಕಿಚ್ಚನ ಸಿನಿ ಜೀವನ ಆರಂಭವಾದ ತಿಂಗಳು. ಕಳೆದ ವರ್ಷ ಇದೇ ತಿಂಗಳು ದುಬೈನ ಬುರ್ಜ್ ಖಲೀಫಾದಲ್ಲಿ ವಿಕ್ರಾಂತ್ ರೋಣ ಟೀಸರ್ ಬಿಡುಗಡೆಯಾಗಿತ್ತು. ಈ ವರ್ಷ ಇದೇ ತಿಂಗಳು ಸಿನಿಮಾ ಬಿಡುಗಡೆಯಾಗಲಿದೆ.