ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಜನ್ಮದಿನದ ಸಂಭ್ರಮವಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ಕೊರೋನಾದಿಂದಾಗಿ ಕಳೆದ ಎರಡು ವರ್ಷ ಸುದೀಪ್ ಸಾರ್ವಜನಿಕವಾಗಿ ಬರ್ತ್ ಡೇ ಆಚರಿಸಿರಲಿಲ್ಲ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಬರ್ತ್ ಡೇ ಆಚರಿಸುತ್ತಿದ್ದಾರೆ. ಮಧ‍್ಯರಾತ್ರಿ ಮನೆಯ ಮುಂದೆ ಜಮಾಯಿಸಿದ್ದ ಅಭಿಮಾನಿಗಳಿಗೆ ದರ್ಶನ ನೀಡಿದ ಕಿಚ್ಚ ಹುಟ್ಟುಹಬ್ಬ ಆಚರಿಸಿದ್ದಾರೆ. ಅಭಿಮಾನಿಗಳು ಕಿಚ್ಚನಿಗಾಗಿಯೇ ಬಾ ಬಾರೋ ಮಾಣಿಕ್ಯ ಎನ್ನುವ ಹಾಡು ನಿರ್ಮಿಸಿ ರಿಲೀಸ್ ಮಾಡಿದ್ದಾರೆ.