Webdunia - Bharat's app for daily news and videos

Install App

ಈ ಬಾರಿ ಚುನಾವಣೆ ಪ್ರಚಾರ ಮಾಡುವ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ

Krishnaveni K
ಭಾನುವಾರ, 24 ಮಾರ್ಚ್ 2024 (10:31 IST)
Photo Courtesy: Twitter
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಿಚ್ಚ ಸುದೀಪ್ ಬಿಜೆಪಿ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲಿದ್ದಾರಾ ಎಂಬ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ.

ಕಳೆದ ಬಾರಿ ಬಸವರಾಜ ಬೊಮ್ಮಾಯಿವರ ಮೇಲಿನ ಆತ್ಮೀಯತೆಯಿಂದಾಗಿ ಪ್ರಚಾರ ಮಾಡಿದ್ದರು. ಆದರೆ ಆ ಚುನಾವಣೆಯಲ್ಲಿ ಬಿಜೆಪಿ ಸೋತಿತ್ತು. ಹೀಗಾಗಿ ಕಿಚ್ಚ ಸುದೀಪ್ ಕೂಡಾ ಟ್ರೋಲಿಗರಿಗೆ ಆಹಾರವಾಗಿದ್ದರು. ಆದರೆ ಈ ಬಾರಿ ಅವರು ಚುನಾವಣೆ ಪ್ರಚಾರ ಮಾಡುತ್ತಾರಾ ಎಂಬ ಅನುಮಾನ ಅಭಿಮಾನಿಗಳಲ್ಲಿದೆ. ಇದಕ್ಕೆ ಅವರು ಉತ್ತರ ನೀಡಿದ್ದಾರೆ.

ಕಿರುತೆರೆ ನಟ, ಸಿಸಿಎಸ್ ಸಹ ಆಟಗಾರ ಚಂದನ್ ಕುಮಾರ್ ಹೊಸ ಹೋಟೆಲ್ ಉದ್ಘಾಟನೆಗೆ ಬಂದಿದ್ದಾಗ ಅವರಿಗೆ ಈ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿರುವ ಅವರು ಕಳೆದ ಬಾರಿ ನಾನು ಯಾಕೆ ಚುನಾವಣೆ ಪ್ರಚಾರ ಮಾಡಿದೆ ಎಂಬುದಕ್ಕೆ ಸ್ಪಷ್ಟನೆ ನೀಡಿದ್ದೆ. ಈ ಬಾರಿ ಇದುವರೆಗೆ ಯಾರೂ ನನ್ನ ಕರೆದಿಲ್ಲ. ಕರೆದಾಗ ನೋಡೋಣ ಎಂದಿದ್ದಾರೆ.

ಇನ್ನು ರಾಜಕೀಯಕ್ಕೆ ಬರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಆಯಾ ಕಾಲಕ್ಕೆ ಹೇಗೆ ಅನಿಸುತ್ತದೋ ಅದೇ ರೀತಿ ಮಾಡುವುದಾಗಿ ಹೇಳಿದ್ದಾರೆ. ಆ ಮೂಲಕ ರಾಜಕೀಯಕ್ಕೆ ಬರುವುದಕ್ಕೆ ಸ್ಪಷ್ಟವಾಗಿ ನಿರಾಕರಣೆಯನ್ನಂತೂ ಮಾಡಿಲ್ಲ. ಹೀಗಾಗಿ ಮುಂದೊಂದು ದಿನ ರಾಜಕೀಯಕ್ಕೆ ಬಂದರೂ ಬರಬಹುದು ಎಂದು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments