Select Your Language

Notifications

webdunia
webdunia
webdunia
webdunia

ಬಿಗ್ ಬಾಸ್ ಕನ್ನಡ 7 ಬಗ್ಗೆ ಮಹತ್ವದ ಸುಳಿವು ಕೊಟ್ಟ ಕಿಚ್ಚ ಸುದೀಪ್

ಬಿಗ್ ಬಾಸ್ ಕನ್ನಡ 7 ಬಗ್ಗೆ ಮಹತ್ವದ ಸುಳಿವು ಕೊಟ್ಟ ಕಿಚ್ಚ ಸುದೀಪ್
ಬೆಂಗಳೂರು , ಸೋಮವಾರ, 16 ಸೆಪ್ಟಂಬರ್ 2019 (09:08 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿ ಮತ್ತೆ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಶುರು ಮಾಡುವ ಬಗ್ಗೆ ಈಗಾಗಲೇ ಘೋಷಣೆ ಮಾಡಿದ್ದು, ಪ್ರೋಮೋ ಕೂಡಾ ಹೊರಬಿಟ್ಟಿದೆ.


ಈ ಬಾರಿ ಬಿಗ್ ಬಾಸ್ ನಲ್ಲಿ ಕಾಮನ್ ಮ್ಯಾನ್ ಇರಲ್ಲ. ಕೇವಲ ಸೆಲೆಬ್ರಿಟಿಗಳಿಗೆ ಮಾತ್ರ ಪ್ರವೇಶ ಎಂದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿ ತಿಳಿಸಿದೆ. ಈ ಬಗ್ಗೆ ವೀಕ್ಷಕರಿಂದ ಸಾಮಾಜಿಕ ಜಾಲತಾಣದಲ್ಲಿ ಮಿಶ್ರ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಅದರ ನಡುವೆ ಪ್ರೋಮೋದಲ್ಲಿ ಬಿಗ್ ಬಾಸ್ ಕನ್ನಡ 7 ನೇ ಆವೃತ್ತಿ ಯಾವಾಗ ಶುರುವಾಗಲಿದೆ ಎಂಬುದರ ಬಗ್ಗೆ ಕಿಚ್ಚ ಸುದೀಪ್ ಮಹತ್ವದ ಸುಳಿವು ಬಿಟ್ಟುಕೊಟ್ಟಿದ್ದು, ಅಕ್ಟೋಬರ್ ಎರಡನೇ ವಾರದಲ್ಲಿ ಆರಂಭವಾಗಬಹುದು ಎಂದಿದ್ದಾರೆ. ಹೀಗಾಗಿ ಬಿಗ್ ಬಾಸ್ ಗೆ ಇನ್ನೂ ಒಂದು ತಿಂಗಳ ಕಾಯಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ ಬರ್ತ್ ಡೇಗೆ ಹಾರ ತುರಾಯಿ ಬಿಟ್ಟು ಗಿಡ ತನ್ನಿ ಎಂದ ರಿಯಲ್ ಸ್ಟಾರ್ ಉಪೇಂದ್ರ