ಬೆಂಗಳೂರು: ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆ ದಿನವನ್ನು ಅಭಿಮಾನಿಗಳಿಗೆಂದೇ ಮೀಸಲಿಟ್ಟಿದ್ದಾರೆ.
									
										
								
																	
ಕೊರೋನಾ ಕಾರಣದಿಂದ ಬಹಿರಂಗವಾಗಿ ಅಭಿಮಾನಿಗಳೊಂದಿಗೆ ಕಿಚ್ಚ ಬರ್ತ್ ಡೇ ಆಚರಿಸಿಕೊಳ್ಳುತ್ತಿಲ್ಲ. ಆದರೆ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳನ್ನು ಸಂಪರ್ಕಿಸಲಿದ್ದಾರೆ.
									
			
			 
 			
 
 			
			                     
							
							
			        							
								
																	ಸೆಪ್ಟೆಂಬರ್ 2 ರಂದು ಸಂಜೆ 6 ಗಂಟೆಗೆ ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಪುಟದಲ್ಲಿ ಏಕಕಾಲಕ್ಕೆ ಲೈವ್ ಆಗಿ ಬರಲಿದ್ದು, ಅಭಿಮಾನಿಗಳ ಶುಭಾಶಯ ಸ್ವೀಕರಿಸಲಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆಯಾಗದಂತೆ ನೋಡಿಕೊಳ್ಳಲಿದ್ದಾರೆ.