ಕಿಚ್ಚ ಸುದೀಪ್ ‘ಮ್ಯಾಕ್ಸ್’ ಸಿನಿಮಾದ ಕತೆ ಲೀಕ್?

Krishnaveni K
ಮಂಗಳವಾರ, 9 ಜನವರಿ 2024 (10:40 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿರುವ ಮ್ಯಾಕ್ಸ್ ಸಿನಿಮಾದ ಕತೆಯ ಎಳೆ ಚಿತ್ರೀಕರಣ ಹಂತದಲ್ಲಿರುವಾಗಲೇ ಸೋರಿಕೆಯಾಗಿದೆಯೇ? ಹೀಗೊಂದು ಅನುಮಾನ ಮೂಡಿದೆ.

ಸೋಷಿಯಲ್ ಮೀಡಿಯಾದಲ್ಲಿ ಮ್ಯಾಕ್ಸ್ ಒನ್ ಲೈನ್ ಕತೆ ಹರಿದಾಡುತ್ತಿದ್ದು, ಇದನ್ನು ಹರಿಯಬಿಟ್ಟವರು ಯಾರು ಎಂದು ತಿಳಿದುಬಂದಿಲ್ಲ. ಸದ್ಯಕ್ಕೆ ಮ್ಯಾಕ್ಸ್ ಸಿನಿಮಾ ಚೆನ್ನೈನಲ್ಲಿ ಅಂತಿಮ ಹಂತದ ಚಿತ್ರೀಕರಣ ನಡೆಸುತ್ತಿದೆ.

ಸುದೀಪ್ ಈ ಸಿನಿಮಾದಲ್ಲಿ ಅರ್ಜುನ್ ಮಹಾಕ್ಷಯ್ ಎಂಬ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಸಸ್ಪೆಂಡ್ ಆಗಿ ಎರಡು ತಿಂಗಳ ಬಳಿಕ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಠಾಣೆಗೆ ಬರುವಾಗ ಸಚಿವರ ಪುತ್ರನೊಬ್ಬ ದೌರ್ಜನ್ಯವೆಸಗುವುದು ಕಂಡುಬರುತ್ತದೆ. ಈ ವೇಳೆ ಸಚಿವರ ಪುತ್ರನನ್ನು ಅರ್ಜುನ್ ಅರೆಸ್ಟ್ ಮಾಡುತ್ತಾರೆ. ಆದರೆ ದರುದೃಷ್ಟವಶಾತ್ ಅರ್ಜುನ್ ಕೊಲೆಯಾಗುತ್ತಾನೆ. ಹಾಗಿದ್ದರೆ ಅರ್ಜುನ್ ಹೇಗೆ ರಕ್ಷಿಸಿಕೊಳ್ಳುತ್ತಾನೆ ಎಂಬುದೇ ಕತೆ ಎನ್ನಲಾಗಿದೆ.

ಮ್ಯಾಕ್ಸ್ ಸಿನಿಮಾ ಔಟ್ ಆಂಡ್ ಔಟ್‍ ಆಕ್ಷನ್ ಸಿನಿಮಾವಾಗಿರಲಿದೆ. ವಿಜಯ್ ಕಾರ್ತಿಕೇಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ಏಪ್ರಿಲ್ ವೇಳೆಗೆ ಸಿನಿಮಾ ರಿಲೀಸ್ ಆಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments