Publish Date: Fri, 19 Mar 2021 (09:59 IST)
Updated Date: Fri, 19 Mar 2021 (10:02 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಿನ್ನೆ ಸಿಎಂ ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸಿಎಂ ನಿವಾಸಕ್ಕೆ ತೆರಳಿದ ಸುದೀಪ್ ಬಿಎಸ್ ವೈ ಮತ್ತು ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟಕ್ಕೂ ಕಿಚ್ಚ ಯಾವ ವಿಚಾರಕ್ಕೆ ಸಿಎಂ ಭೇಟಿ ಮಾಡಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ.
ಸುದೀಪ್ ಇತ್ತೀಚೆಗೆ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವಿಚಾರವಾಗಿ ಅವರ ಜೊತೆ ಮಾತುಕತೆ ನಡೆಸಿರಬಹುದೇ ಅಥವಾ ಕೋಟಿಗೊಬ್ಬ 3 ರಿಲೀಸ್ ಗೆ ಸಂಬಂಧಿಸಿದಂತೆ ಸಿಎಂ ಜೊತೆ ಮಾತುಕತೆ ನಡೆಸಿರಬಹುದೇ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಯಾವ ಕಾರಣಕ್ಕೆ ಭೇಟಿಯಾಗಿದ್ದಾರೆ ಎಂಬ ಕಾರಣವನ್ನು ಕಿಚ್ಚ ಬಾಯ್ಬಿಟ್ಟಿಲ್ಲ.