Publish Date: Thu, 04 Jan 2024 (08:58 IST)
Updated Date: Thu, 04 Jan 2024 (09:00 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಚೆನ್ನೈನಲ್ಲಿ ಭರದಿಂದ ನಡೆಯುತ್ತಿದೆ. ಇದೀಗ ಕಿಚ್ಚ ಸುದೀಪ್ ಸಿನಿಮಾ ಲುಕ್ ಒಂದನ್ನು ಹೊರಬಿಟ್ಟಿದ್ದಾರೆ.
ಮ್ಯಾಕ್ಸ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕ್ಲೈಮ್ಯಾಕ್ಸ್ ನಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ಸ್ವತಃ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಪ್ರಕಟಿಸುವ ಮೂಲಕ ಬಹಿರಂಗಪಡಿಸಿದ್ದಾರೆ.
ಮ್ಯಾಕ್ಸ್ ಸಿನಿಮಾ ಭರ್ಜರಿ ಆಕ್ಷನ್ ದೃಶ್ಯಗಳಿರುವ ಮಾಸ್ ಸಿನಿಮಾ. ಈ ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಸುದೀಪ್ ರೋಚಕ ಸಾಹಸ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಈಗ ಪ್ರಕಟಿಸಿರುವ ಫೋಟೋದಲ್ಲಿ ಸುದೀಪ್ ಬೈಸೆಪ್ಸ್ ತೋರಿಸಿಕೊಂಡು ಸಖತ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದ ಚಿತ್ರೀಕರಣ ಅಂತಿಮ ಹಂತಕ್ಕೆ ಬಂದಿದ್ದು ಇದೇ ವರ್ಷ ಏಪ್ರಿಲ್ ನಲ್ಲಿ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸಿನಿಮಾವನ್ನು ವಿಜಯ್ ಕಾರ್ತಿಕೇಯನ್ ನಿರ್ದೇಶಿಸುತ್ತಿದ್ದಾರೆ.