Publish Date: Mon, 21 Jan 2019 (09:11 IST)
Updated Date: Mon, 21 Jan 2019 (09:13 IST)
ಬೆಂಗಳೂರು: ಸೀತಾರಾಮ ಕಲ್ಯಾಣ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿರುವ ಸಂದರ್ಭದಲ್ಲಿ ಕಿಚ್ಚ ಸುದೀಪ್ ನಿಖಿಲ್ ಕುಮಾರಸ್ವಾಮಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ದಾಖಲೆ ವೀಕ್ಷಣೆ ಪಡೆದ ಟ್ರೈಲರ್ ಬಗ್ಗೆ ಕಿಚ್ಚ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಟ್ರೈಲರ್ ನೋಡುವಂತೆ ಅಭಿಮಾನಿಗಳಿಗೆ ಮನವಿಯನ್ನೂ ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮತ್ತು ನಿರ್ದೇಶಕ ಹರ್ಷ ಸೇರಿದಂತೆ ಇಡೀ ಚಿತ್ರತಂಡಕ್ಕೆ ಅಭಿನಂದನೆಗಳು. ನಿಮಗೆ ಎಲ್ಲಾ ರೀತಿಯಲ್ಲೂ ಯಶಸ್ಸು ಸಿಗಲಿ ಎಂದು ಸುದೀಪ್ ಹಾರೈಸಿದ್ದಾರೆ. ‘ಸೀತಾರಾಮ ಕಲ್ಯಾಣ’ ಸಿನಿಮಾದಲ್ಲಿ ನಿಖಿಲ್ ಕುಮಾರಸ್ವಾಮಿ ಜತೆಗೆ ರಚಿತಾ ರಾಂ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ