Publish Date: Sat, 11 Jul 2020 (10:39 IST)
Updated Date: Sat, 11 Jul 2020 (10:41 IST)
ಬೆಂಗಳೂರು: ಕಿಚ್ಚ ಸುದೀಪ್ ಕಷ್ಟದಲ್ಲಿರುವ ಅಭಿಮಾನಿಗಳಿಗೆ ಸದ್ದಿಲ್ಲದೇ ಸಹಾಯ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಇದೀಗ ಕಿಚ್ಚ ಮಾಡಿರುವ ಕೆಲಸವೊಂದು ಅದೇ ಕಾರಣಕ್ಕೆ ಸುದ್ದಿಯಾಗಿದೆ.
ಅಪೆಂಡಿಕ್ಸ್ ನಿಂದ ಬಳಲುತ್ತಿರುವ ಅಭಿಮಾನಿಯೊಬ್ಬರಿಗೆ ವಿಡಿಯೋ ಕಾಲ್ ಮಾಡಿದ ಕಿಚ್ಚ ಸುದೀಪ್ ಅವರ ಜತೆ ಮಾತುಕತೆ ನಡೆಸಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಸದ್ಯದಲ್ಲೇ ಭೇಟಿಯಾಗುವುದಾಗಿ ಭರವಸೆ ನೀಡಿದ್ದಾರೆ. ಕಿಚ್ಚನ ಹೃದಯವಂತಿಕೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.