Select Your Language

Notifications

webdunia
webdunia
webdunia
webdunia

ಸದ್ಯದಲ್ಲೇ ಸಿಗಲಿದೆ ಕಿಚ್ಚ ಸುದೀಪ್ ಕಡೆಯಿಂದ ಮತ್ತೊಂದು ಸಿನಿಮಾ ಅಪ್ ಡೇಟ್

Kiccha Sudeep
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ಮ್ಯಾಕ್ಸ್ ಸಿನಿಮಾ ಶೂಟಿಂಗ್ ಹಂತದಲ್ಲಿರುವಾಗಲೇ ಮತ್ತೊಂದು ಸಿನಿಮಾ ಬಗ್ಗೆ ಅಪ್ ಡೇಟ್ ಸಿಕ್ಕಿದೆ.

ಸುದೀಪ್ ವಿಕ್ರಾಂತ್ ರೋಣ ಸಿನಿಮಾ ಮಾಡಿದ್ದ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಮತ್ತೊಂದು ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಈಗಾಗಲೇ ಈ ಸಿನಿಮಾಗೆ ಬಿಲ್ಲ ರಂಗ ಭಾಷಾ ಎಂದು ಟೈಟಲ್ ಕೂಡಾ ಫಿಕ್ಸ್ ಆಗಿತ್ತು.

ಇದೀಗ ಆ ಸಿನಿಮಾ ಬಗ್ಗೆ ಅಪ್ ಡೇಟ್ ಸಿಕ್ಕಿದೆ. ಇದೇ ತಿಂಗಳಾಂತ್ಯಕ್ಕೆ ಕಿಚ್ಚ ಸುದೀಪ್ ನಾಯಕರಾಗಿರುವ ಬಿಲ್ಲ ರಂಗ ಭಾಷಾ ಸಿನಿಮಾದ ಅಪ್ ಡೇಟ್ ಕೊಡುವುದಾಗಿ ನಿರ್ದೇಶಕ ಅನೂಪ್ ಭಂಡಾರಿ ತಿಳಿಸಿದ್ದಾರೆ. ಇದು ಕಿಚ್ಚನ ಅಭಿಮಾನಿಗಳ ಖುಷಿಗೆ ಕಾರಣವಾಗಿದೆ.

ಇದಕ್ಕೆ ಮೊದಲು ಕಿಚ್ಚ ಸುದೀಪ್ ಇತ್ತೀಚೆಗೆ ಅಭಿಮಾನಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಇದೇ ವರ್ಷ ಬಿಲ್ಲ ರಂಗ ಭಾಷಾ ಸಿನಿಮಾ ಮಾಡುತ್ತಿರುವುದಾಗಿ ಹೇಳಿದ್ದರು. ಆ ಮಾತು ಇದೀಗ ನಿಜವಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಮೌಳಿ ಜೊತೆ ಸಿನಿಮಾಗೆ ಮಹೇಶ್ ಬಾಬುಗೆ ಜರ್ಮನಿಯಲ್ಲಿ ಟ್ರೈನಿಂಗ್!