ಬೆಂಗಳೂರು: ಬಾಲಿವುಡ್ ನ ದಬಾಂಗ್ 3 ಸಿನಿಮಾದ ಅಭಿನಯಕ್ಕಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಪ್ರತಿಷ್ಠಿತಿ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಲಭಿಸಿದೆ.
ಕಳೆದ ತಿಂಗಳು ಬಿಡುಗಡೆಯಾಗಿದ್ದ ಸಲ್ಮಾನ್ ಖಾನ್ ನಾಯಕರಾಗಿದ್ದ ದಬಾಂಗ್ 3 ಸಿನಿಮಾದಲ್ಲಿ ಕಿಚ್ಚ ಸುದೀಪ್ ಖಳನಟರಾಗಿ ಪಾತ್ರ ಮಾಡಿದ್ದರು. ಈ ಸಿನಿಮಾದ ಬಲ್ಲಿ ಸಿಂಗ್ ಪಾತ್ರದ ಅಭಿನಯಕ್ಕಾಗಿ ಕಿಚ್ಚನಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭ್ಯವಾಗಿದೆ.
ದಾದಾ ಸಾಹೇಬ್ ಫಾಲ್ಕೆ ಮತ್ತು ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮದಿನ ಪ್ರಯುಕ್ತ ದಾದಾ ಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಸಮಾರಂಭವನ್ನು ಫೆಬ್ರವರಿ 20 ರಂದು ಅದ್ಧೂರಿಯಾಗಿ ಆಯೋಜಿಸಲಾಗಿದ್ದು, ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಿಂದ ಕಿಚ್ಚ ಪ್ರಶಸ್ತಿ ಸ್ವೀಕರಿಸಲಿದ್ದಾರೆ.