Select Your Language

Notifications

webdunia
webdunia
webdunia
webdunia

ನಿರ್ಮಾಪಕ ಸಂಘದ ವಿರುದ್ಧ ಕಿಚ್ಚ ಸುದೀಪ್ ಲೀಗಲ್ ನೋಟಿಸ್

ನಿರ್ಮಾಪಕ ಸಂಘದ ವಿರುದ್ಧ ಕಿಚ್ಚ ಸುದೀಪ್ ಲೀಗಲ್ ನೋಟಿಸ್
ಬೆಂಗಳೂರು , ಶನಿವಾರ, 8 ಜುಲೈ 2023 (16:21 IST)
ಬೆಂಗಳೂರು: ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ನಿರ್ಮಾಪಕರ ವಿರುದ್ಧ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ನೀಡಿದ್ದಾರೆ.

ಮೊನ್ನೆಯಷ್ಟೇ ಕಿಚ್ಚ ಸುದೀಪ್ ಮುಂಗಡ ಪಡೆದು ಕಾಲ್ ಶೀಟ್ ನೀಡದೇ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕ ಎಂಎನ್ ಕುಮಾರ್ ಮತ್ತು ಇತರರು ಮಾಧ್ಯಮಗೋಷ್ಠಿಯಲ್ಲಿ ಆರೋಪ ಮಾಡಿದ್ದರು. ಕುಮಾರ್ ಜೊತೆಗೆ ಅಂದು ಇದ್ದ ನಿರ್ಮಾಪಕ ಎಂಎನ್ ಸುರೇಶ್ ಗೂ ಸುದೀಪ್ ಲೀಗಲ್ ನೋಟಿಸ್ ನೀಡಿದ್ದಾರೆ.

ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ನಿರ್ಮಾಪಕರು ಕಿಚ್ಚ ಸುದೀಪ್ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಸುದೀಪ್ ಹಣ ಪಡೆದಿರುವ ವಿಚಾರ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೂ ಗೊತ್ತು ಎಂದು ಬಾಂಬ್ ಸಿಡಿಸಿದ್ದಾರೆ. ಹೀಗಾಗಿ ಈ ಪ್ರಕರಣ ಮತ್ತಷ್ಟು ಕಗ್ಗಂಟಾಗುವ ಸೂಚನೆ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲೇಷ್ಯಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಹವಾ