Select Your Language

Notifications

webdunia
webdunia
webdunia
webdunia

ಫ್ಯಾನ್ಸ್ ಬಳಿ ವಿಶೇಷ ಮನವಿ ಮಾಡಿ ವಿಡಿಯೋ ಹಂಚಿಕೊಂಡ ಕಿಚ್ಚ ಸುದೀಪ್

Kiccha Sudeep, Sudeep Fan, Kannada Film Industry

Sampriya

ಬೆಂಗಳೂರು , ಸೋಮವಾರ, 31 ಮಾರ್ಚ್ 2025 (19:10 IST)
Photo Courtesy X
ಕನ್ನಡ ನಟ ಕಿಚ್ಚ ಸುದೀಪ್ ತಮ್ಮ ಅಭಿಮಾನಿಯ ಮಗಳ  ಆರೋಗ್ಯ ಸಲುವಾಗಿ ತಮ್ಮ ಫ್ಯಾನ್ಸ್ ಬಳಿ ಮನವಿ ಮಾಡಿದ್ದಾರೆ. ವಿಡಿಯೋ ಮೂಲಕ ಸುದೀಪ್ ಮನವಿ ಮಾಡಿದ್ದಾರೆ.‌

ಈ ವಿಡಿಯೋ ನೋಡುತ್ತಿರುವ ಪ್ರತಿಯೊಬ್ಬರಿಗೂ ಕಿಚ್ಚನ ನಮಸ್ತೇ. ವಿಡಿಯೋ ಮಾಡಲು ಬಹಳ ಮುಖ್ಯವಾದ ಕಾರಣ ಇದೆ. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ಹಾಗೂ ಅವರ ಪತ್ನಿ ನಾಗಶ್ರೀ ದಂಪತಿಗೆ 1 ವರ್ಷ 10 ತಿಂಗಳ ಪುಟ್ಟ ಮಗಳು ಇದ್ದಾಳೆ. ಮಗುವಿನ ಹೆಸರು ಕೀರ್ತನಾ. ಆ ಮುಗ್ಧ ಕಂದಮ್ಮನಿಗೆ ಸ್ಪೈನ್ ಮ್ಯಾಸ್ಕ್ಯೂಲಾರ್ ಅಟ್ರೋಫಿ (SMA2) ಎಂಬ ಆರೋಗ್ಯ ಸಮಸ್ಯೆ ಇದೆ. ಇದು ಬಹಳ ಅಪರೂಪದ ಕಾಯಿಲೆ. ಈ ಕಾಯಿಲೆಗೆ ಔಷಧಿ ಇದೆ. ಗುಣ ಆಗುವ ಸಾಧ್ಯತೆಯಿದೆ ಆದರೆ ಆ ವೈದ್ಯಕೀಯ ಚಿಕಿತ್ಸೆಗೆ ಬೇಕಾದ ಹಣ ಎಷ್ಟು ಎಂದು ಕೇಳಿದಂತೆ ಮೈ ಜುಮ್ ಅನಿಸುತ್ತದೆ. ಈ ಚಿಕಿತ್ಸೆ ಬೇಕಾಗಿರುವುದು 16 ಕೋಟಿ ರೂ..ಪೋಷಕರು ಆಸ್ತಿಯನ್ನು ಮಾರಿ ಮಗುವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಸಾಕಷ್ಟು ಜನರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಸಹಾಯ ಮಾಡಲು ಮುಂದೆ ಬಂದಿದ್ದಾರೆ. ನನ್ನ ಕೈಲಾದ ಸಹಾಯ ನಾನು ಮಾಡಿದ್ದೀನಿ. ನೀವು ನಿಮ್ಮ ಕೈಯಲ್ಲಿ ಆದಷ್ಟು ಸಹಾಯ ಮಾಡಿ ಎಂದುಸುದೀಪ್ ಅವರು ಮನವಿ ಮಾಡಿದ್ದಾರೆ.

ಸುದೀಪ್ ಅವರು ಪುಟ್ಟ ಕಂದಮ್ಮನ ಆರೋಗ್ಯದ ಸಲುವಾಗಿ ಮಾಡಿದ ವಿಡಿಯೋಗೇ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.  ಎಲ್ಲರೂ ಕೈಲಾದಷ್ಟು ಮಗುವಿನ ಚಿಕಿತ್ಸೆಗೆ ಸಹಾಯ ಮಾಡಿ ಎಂದು ಸುದೀಪ್ ಮನವಿ ಮಾಡಿರೋದು ನೋಡಿ ಫ್ಯಾನ್ಸ್ ಭೇಷ್ ಎಂದಿದ್ದಾರೆ.

ಮ್ಯಾಕ್ಸ್ ಸಿನಿಮಾ ಸಕ್ಸಸ್ ಬಳಿಕ ಸುದೀಪ್ ಅವರು ಇದೀಗ ಹೊಸ ಸಿನಿಮಾದ ತಯಾರಿಯಲ್ಲಿದ್ದಾರೆ. ಅವರ ಮುಂದಿನ ಸಿನಿಮಾವನ್ನು ವಿಕ್ರಾಂತ್ ರೋಣ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಮಾಡಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಟುಂಬದವರೊಂದಿಗೆ ಈದ್ ಲಂಚ್ ಎಂಜಾಯ್ ಮಾಡಿದ ಕರೀನಾ, ಸೈಫ್ ದಂಪತಿ