ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಗ್ಗೆ ತಾನು ಪ್ರತಿಕ್ರಿಯಿಸಲಿಲ್ಲ ಎಂಬುದನ್ನೇ ಎಡಿಟ್ ಮಾಡಿದ ವಿಡಿಯೋ ಪ್ರಕಟಿಸಿ ವಿವಾದ ಮಾಡಿದ್ದಕ್ಕೆ ಕಿಚ್ಚ ಸುದೀಪ್ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.
ನವರಸನಾಯಕ ಜಗ್ಗೇಶ್ ಅಭಿನಯದ ತೋತಾಪುರಿ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಕೆಜಿಎಫ್ 2 ವಿವಾದಕ್ಕೆ ಟಾಂಗ್ ಕೊಟ್ಟಿದ್ದಾರೆ.
ಸುದೀಪ್ ಎಲ್ಲಾ ಚಿತ್ರಗಳನ್ನು ಪ್ರೋತ್ಸಾಹಿಸುತ್ತಾರೆ ಎಂದು ನಿರೂಪಕರು ಹೇಳಿದ್ದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಸುದೀಪ್ ಸಿನಿಮಾಗೆ ಸಪೋರ್ಟ್ ಮಾಡಿಲ್ಲ ಅಂದ್ರೂ ನಾನು ಸುದ್ದಿಯಲ್ಲಿರ್ತೀನಿ ಎಂದರು. ಇನ್ನೊಂದು ಪ್ರಶ್ನೆಗೆ ಉತ್ತರಿಸುವಾಗ ಎಲ್ಲರಿಗೂ ನಾನು ಒಂದೊಂದು ರೀತಿ ಕಾಣಬಹುದು. ಇದಕ್ಕೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು.