ಬೆಂಗಳೂರು: ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಈಗ ಬಿಗ್ ಬಜೆಟ್ ಸಿನಿಮಾಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡುತ್ತಿದೆ.
ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ. ಇದರ ಬೆನ್ನಲ್ಲೇ ಹೊಂಬಾಳೆ ಫಿಲಂಸ್ ನ ಕಾರ್ತಿಕ್ ಗೌಡ ಮತ್ತು ಕಿಚ್ಚ ಸುದೀಪ್ ಜೊತೆಗಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇತ್ತೀಚೆಗೆ ಸುದೀಪ್ ಭರ್ಜರಿ ವರ್ಕೌಟ್ ಮಾಡುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದರು. ಹೀಗಾಗಿ ಹೊಂಬಾಳೆ ಫಿಲಂಸ್ ಜೊತೆ ಕಿಚ್ಚ ಹೊಸ ಸಿನಿಮಾ ಮಾಡಲಿದ್ದಾರೆಯೇ ಎಂಬ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.
-Edited by Rajesh patil