Webdunia - Bharat's app for daily news and videos

Install App

ಕರಟಕ ದಮನಕ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಕಿಚ್ಚ ಸುದೀಪ್

Krishnaveni K
ಮಂಗಳವಾರ, 27 ಫೆಬ್ರವರಿ 2024 (11:25 IST)
Photo Courtesy: Twitter
ಬೆಂಗಳೂರು: ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಜೊತೆಯಾಗಿ ನಟಿಸಿರುವ ಯೋಗರಾಜ್ ಭಟ್ ನಿರ್ದೇಶನದ ಕರಟಕ ದಮನಕ ಚಿತ್ರತಂಡದಿಂದ ಹೊಸ ಅಪ್ ಡೇಟ್ ಸಿಕ್ಕಿದೆ.

ಸಿನಿಮಾದ ಟೀಸರ್ ಲಾಂಚ್ ಆಗುತ್ತಿದ್ದು, ಕಿಚ್ಚ ಸುದೀಪ್ ಟೀಸರ್ ಲಾಂಚ್ ಮಾಡಲಿದ್ದಾರೆ. ಈ ಸಿಹಿ ಸುದ್ದಿಯನ್ನು ಯೋಗರಾಜ್ ಭಟ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇಂದು ಸಂಜೆ 6.30 ಕ್ಕೆ ಕರಟಕ ದಮನಕ ಸಿನಿಮಾದ ಟೀಸರ್ ನ್ನು ಕಿಚ್ಚ ಸುದೀಪ್ ಲಾಂಚ್ ಮಾಡುತ್ತಿದ್ದಾರೆ. ‘ಹಮ್ಮೆಯ ಕಿಚ್ಚ ಸುದೀಪ ಅವರಿಂದ ಪಾತ್ರ ಪರಿಚಯ (ಟೀಸರ್) ಸಂಜೆ 6.30ಕ್ಕೆ’ ಎಂದು ಯೋಗರಾಜ್ ಭಟ್ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.

ಕರಟಕ ದಮನಕ ಸಿನಿಮಾ ಮಾರ್ಚ್ 8 ರಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಪೋಸ್ಟರ್ ಎರಡು ಹಾಡು ಈಗಾಗಲೇ ಬಿಡುಗಡೆಯಾಗಿದೆ. ಅದರಲ್ಲೂ ರಿಯಲ್ ಸ್ಟಾರ್ ಉಪೇಂದ್ರ ಹಾಡಿದ್ದ ಡೀಗ ಡಿಗರಿ ಹಾಡಂತೂ ಸೂಪರ್ ಹಿಟ್ ಆಗಿದೆ. ಅದಾದ ಬಳಿಕ ಶಿವರಾಜ್ ಕುಮಾರ್ ನಟಿಸಿದ ರೊಮ್ಯಾಂಟಿಕ್ ಹಾಡೊಂದು ಬಿಡುಗಡೆಯಾಗಿತ್ತು.

ಕರಟಕ ದಮನಕ ಸಿನಿಮಾದಲ್ಲಿ ಶಿವಣ್ಣ ಮತ್ತು ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಸಮಾನ ಪಾತ್ರ ಮಾಡಿದ್ದಾರೆ. ಪ್ರಭುದೇವ-ಶಿವಣ್ಣ ಇದ್ದ ಮೇಲೆ ಭರ್ಜರಿ ಡ್ಯಾನ್ಸ್ ಕೂಡಾ ಇರಲೇಬೇಕಲ್ವಾ? ಅದೆಲ್ಲವೂ ಈ ಸಿನಿಮಾದಲ್ಲಿ ನೋಡಲು ಸಿಗಲಿದೆ. ಈ ಮೊದಲು ಪ್ರಭುದೇವ-ಪುನೀತ್ ರಾಜ್ ಕುಮಾರ್ ಜೊತೆ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದರು. ಇದೀಗ ಪ್ರಭುದೇವ-ಶಿವಣ್ಣ ಡ್ಯಾನ್ಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments