Webdunia - Bharat's app for daily news and videos

Install App

ಕಾಟೇರ ಸಿನಿಮಾ ನೋಡ್ತಾರಾ ಕಿಚ್ಚ ಸುದೀಪ್?

Krishnaveni K
ಭಾನುವಾರ, 7 ಜನವರಿ 2024 (09:02 IST)
ಬೆಂಗಳೂರು: ನಟ ದರ್ಶನ್ ನಾಯಕರಾಗಿರುವ ಕಾಟೇರ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಗಳಿಕೆ ಮಾಡುತ್ತಿದ್ದು, ಇದೀಗ ಕಿಚ್ಚ ಸುದೀಪ್ ಸಿನಿಮಾ ವೀಕ್ಷಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗೆ ಕಾಟೇರ ಸಿನಿಮಾದ ವಿಶೇಷ ಪ್ರದರ್ಶನವನ್ನು ಸೆಲೆಬ್ರಿಟಿಗಳಿಗಾಗಿ ಆಯೋಜಿಸಲಾಗಿತ್ತು. ಆ ಶೋನಲ್ಲಿ ಭಾಗಿಯಾಗಲು ಕಿಚ್ಚ ಸುದೀಪ್ ಗೂ ಕರೆ ನೀಡಲಾಗಿತ್ತು. ಆದರೆ ಕಿಚ್ಚ ಆ ಸಂದರ್ಭದಲ್ಲಿ ಚೆನ್ನೈನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಆದರೆ ಸದ್ಯದಲ್ಲೇ ಸಿನಿಮಾ ನೋಡ್ತೀನಿ ಎಂದು ಭರವಸೆ ಕೊಟ್ಟಿದ್ದರಂತೆ.

ಸುದೀಪ್ ಮತ್ತು ದರ್ಶನ್ ಒಂದು ಕಾಲದಲ್ಲಿ ಕುಚಿಕು ಗೆಳೆಯರು. ಆದರೆ ಇಬ್ಬರ ನಡುವೆ ವೈಮನಸ್ಯದಿಂದಾಗಿ ಒಬ್ಬರು ಇರುವ ಕಾರ್ಯಕ್ರಮಕ್ಕೆ ಮತ್ತೊಬ್ಬರು ಬರಲ್ಲ ಎನ್ನುವ ಪರಿಸ್ಥಿತಿಯಾಗಿದೆ. ಆದರೆ ಇತ್ತೀಚೆಗೆ ಸುಮಲತಾ ಅಂಬರೀಶ್ ಬರ್ತ್ ಡೇಯಲ್ಲಿ ಹಲವು ವರ್ಷದ ಬಳಿಕ ಇಬ್ಬರೂ ಭಾಗಿಯಾಗಿದ್ದರು. ಹಾಗಿದ್ದರೂ ಒಬ್ಬರ ಮುಖ ಮತ್ತೊಬ್ಬರು ನೋಡಿರಲಿಲ್ಲ.

ಕಾಟೇರ ಸಿನಿಮಾ ನಿರ್ದೇಶಿಸಿದ್ದ ತರುಣ್ ಸುಧೀರ್ ಗೆ ಕಿಚ್ಚ ಸುದೀಪ್ ಕೂಡಾ ಆಪ್ತರು. ಹೀಗಾಗಿ ತರುಣ್ ಮೇಲಿನ ಪ್ರೀತಿಯಿಂದ ಸುದೀಪ್ ಸಿನಿಮಾ ವೀಕ್ಷಿಸಬಹುದೇನೋ ಎಂಬ ಭರವಸೆ ಅಭಿಮಾನಿಗಳದ್ದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments