Webdunia - Bharat's app for daily news and videos

Install App

ಮ್ಯಾಕ್ಸ್ ಸಿನಿಮಾ ರಿಲೀಸ್ ಯಾವಾಗ ಎಂದು ಬಹಿರಂಗಪಡಿಸಿದ ಕಿಚ್ಚ ಸುದೀಪ್

Krishnaveni K
ಸೋಮವಾರ, 17 ಜೂನ್ 2024 (11:44 IST)
Photo Credit: X
ಬೆಂಗಳೂರು: ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಸಿನಿಮಾ ಬಿಡುಗಡೆಯಾಗಿಯೇ ಇಲ್ಲ. ಹೀಗಾಗಿ ಫ್ಯಾನ್ಸ್ ತುಂಬಾ ನಿರಾಸೆಯಲ್ಲಿದ್ದಾರೆ. ಇದೀಗ ಕೊನೆಗೂ ಸುದೀಪ್ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಕಿಚ್ಚ ಸುದೀಪ್ ಈಗ ತಮಿಳು ನಿರ್ಮಾಣ ಸಂಸ್ಥೆಯ ನಿರ್ಮಾಣದಲ್ಲಿ ಮ್ಯಾಕ್ಸ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದ ಸಂಪೂರ್ಣ ಚಿತ್ರೀಕರಣ ಚೆನ್ನೈನಲ್ಲಿ ವಿಶೇಷ ಸೆಟ್ ನಲ್ಲಿ ನಡೆದಿತ್ತು. ಇತ್ತೀಚೆಗಷ್ಟೇ ಚಿತ್ರತಂಡ ಚಿತ್ರೀಕರಣ ಪೂರ್ತಿ ಮಾಡಿತ್ತು.

ಇದೀಗ ಸುದೀಪ್ ಎಲ್ಲೇ ಹೋದರೂ, ಸೋಷಿಯಲ್ ಮೀಡಿಯಾಗಳಲ್ಲೂ ಅವರಿಗೆ ಮ್ಯಾಕ್ಸ್ ಸಿನಿಮಾ ಯಾವಾಗ ರಿಲೀಸ್ ಎಂಬ ಪ್ರಶ್ನೆ ಬರುತ್ತಲೇ ಇರುತ್ತದೆ. ಕೊನೆಗೂ ಸುದೀಪ್ ಮಾಧ್ಯಮಗಳ ಮುಂದೆ ಮ್ಯಾಕ್ಸ್ ಸಿನಿಮಾ ರಿಲೀಸ್ ಬಗ್ಗೆ ಅಪ್ ಡೇಟ್ ಒಂದನ್ನು ಕೊಟ್ಟಿದ್ದಾರೆ.

ಮ್ಯಾಕ್ಸ್ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಡಬ್ಬಿಂಗ್ ಕೂಡಾ ಹೆಚ್ಚು ಕಡಿಮೆ ಮುಗಿದಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ನಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂದು ಸುದೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಬರೋಬ್ಬರಿ ಎರಡು ವರ್ಷಗಳ ನಂತರ ಸುದೀಪ್ ಸಿನಿಮಾ ಹೊರಬರುತ್ತಿರುವುದು ಅಭಿಮಾನಿಗಳಿಗೂ ಖುಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments