ಮಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿಯಲ್ಲಿರುವ ನಟ ಕಿಚ್ಚ ಸುದೀಪ್ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಮೊನ್ನೆಯಷ್ಟೇ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ತೆರಳಿದ್ದ ಸುದೀಪ್, ನಿನ್ನೆ ಪತ್ನಿ ಪ್ರಿಯಾ ಸುದೀಪ್ ಜೊತೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಅಲ್ಲಿನ ಶ್ರೀಗಳ ಆಶೀರ್ವಾದ ಪಡೆದರು.
ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ನ ಸಿದ್ಧತೆಯಲ್ಲಿರುವ ಹಂತದಲ್ಲೇ ಸುದೀಪ್ ಟೆಂಪಲ್ ರನ್ ನಡೆಸಿದ್ದಾರೆ. ಇಲ್ಲಿ ಕೆಲವು ದಿನಗಳ ಹಿಂದೆ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು.