Publish Date: Sun, 21 Mar 2021 (09:44 IST)
Updated Date: Sun, 21 Mar 2021 (09:46 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾ ಏಪ್ರಿಲ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ ಎಂಬ ಸುದ್ದಿಯಿದೆ.
ಆದರೆ ಅದಕ್ಕೆ ಮೊದಲು ಕೋಟಿಗೊಬ್ಬ3 ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಆಯೋಜಿಸಲಿದೆ. ಮೂಲಗಳ ಪ್ರಕಾರ ಏಪ್ರಿಲ್ 20 ರಂದು ಚಿತ್ರದುರ್ಗದಲ್ಲಿ ಪ್ರಿ ರಿಲೀಸ್ ಈವೆಂಟ್ ಆಯೋಜನೆಯಾಗಲಿದೆ.
ಇತ್ತೀಚೆಗೆ ರಿಲೀಸ್ ಆಗುತ್ತಿರುವ ಸ್ಟಾರ್ ನಟರ ಸಿನಿಮಾಗಳೆಲ್ಲವೂ ಪ್ರಿ ರಿಲೀಸ್ ಈವೆಂಟ್ ಆಯೋಜಿಸುವ ಮೂಲಕ ಅಭಿಮಾನಿಗಳನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ. ಈಗ ಕೋಟಿಗೊಬ್ಬ 3 ತಂಡವೂ ಅದೇ ಪ್ಲ್ಯಾನ್ ಮಾಡಿದೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗುವ ಸಾಧ‍್ಯತೆಯಿದೆ.