Publish Date: Sat, 05 Dec 2020 (10:33 IST)
Updated Date: Sat, 05 Dec 2020 (10:34 IST)
ಬೆಂಗಳೂರು: ಇದುವರೆಗೆ ಕನ್ನಡ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿತ್ತು. ಅಂದರೆ ಭಾರತದ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆಯಾಗಿ ಸುದ್ದಿ ಮಾಡುತ್ತಿತ್ತು. ಆದರೆ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಫ್ಯಾಂಟಮ್ ಸಿನಿಮಾ ಇನ್ನೂ ಒಂದು ಹೆಜ್ಜೆ ಮುಂದಿಡಲಿದೆ.
ಮೂಲಗಳ ಪ್ರಕಾರ ಫ್ಯಾಂಟಮ್ ಸಿನಿಮಾ ಭಾರತದಲ್ಲಿ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವುದಲ್ಲದೆ, ಯುರೋಪಿಯನ್ ಭಾಷೆಗಳಲ್ಲೂ ಬಿಡುಗಡೆಯಾಗುವ ಸಾಧ‍್ಯತೆಯಿದೆ. ಆ ಮೂಲಕ ಕನ್ನಡ ಸಿನಿಮಾವೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ವಿಶ್ವದ ಬೇರೆ ಬೇರೆ ಭಾಷೆಯ ಸಿನಿಮಾ ಮಂದಿ ಜತೆ ಚಿತ್ರತಂಡ ಸಂಪರ್ಕ ಮಾಡಿದೆಯಂತೆ. ಒಂದು ವೇಳೆ ಇದು ಯಶಸ್ವಿಯಾದರೆ ಫ್ಯಾಂಟಮ್ ವಿಶ್ವ ಮಟ್ಟದಲ್ಲಿ ಬಿಡುಗಡೆಯಾಗಲಿದೆ.