Publish Date: Thu, 24 Dec 2020 (09:44 IST)
Updated Date: Thu, 24 Dec 2020 (09:47 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಚಿತ್ರೀಕರಣ ಮುಕ್ತಾಯದ ಹಂತದಲ್ಲಿದ್ದು, ಈ ಸಿನಿಮಾದ ಟೀಸರ್ ಬಿಡುಗಡೆ ವಿಶ್ವದ ಅತ್ಯಂತ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿ ಕೇಳಿಬರುತ್ತಿದೆ.
ಕೊರೋನಾ ನಂತರ ಚಿತ್ರೀಕರಣ ಆರಂಭಿಸಿದ ಮೊದಲ ಬಿಗ್ ಬಜೆಟ್ ಸಿನಿಮಾ ಎಂಬ ಖ್ಯಾತಿ ಹೊಂದಿರುವ ಫ್ಯಾಂಟಮ್ ಈಗ ಅಂತಿಮ ಹಂತದಲ್ಲಿದೆ. ಚಿತ್ರೀಕರಣ ಮುಗಿದ ಮೇಲೆ ಚಿತ್ರತಂಡ ಟೀಸರ್ ಬಿಡುಗಡೆಗೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಮಾಡಲಿದೆ. ಜನವರಿ ಅಂತ್ಯಕ್ಕೆ ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳಾಗುತ್ತಿರುವ ಸಂಭ್ರಮದಲ್ಲಿ ಚಿತ್ರತಂಡ ದುಬೈನ ಐತಿಹಾಸಿಕ ಕಟ್ಟಡದಲ್ಲಿ ಕಾರ್ಯಕ್ರಮ ಆಯೋಜಿಸಿ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದೆ.