Publish Date: Tue, 01 Dec 2020 (09:59 IST)
Updated Date: Tue, 01 Dec 2020 (10:01 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಫ್ಯಾಂಟಮ್ ಸಿನಿಮಾ ಹಲವು ಕಾರಣಗಳಿಗೆ ಸುದ್ದಿಯಾಗುತ್ತಿದೆ. ಮೂಲಗಳ ಪ್ರಕಾರ ಈ ಸಿನಿಮಾ ಪ್ಯಾನ್ ಇಂಡಿಯಾ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ.
ಫ್ಯಾಂಟಮ್ ಎರಡು ಹಂತದ ಚಿತ್ರೀಕರಣ ಮುಗಿಸಿ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಈ ನಡುವೆ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಲು ಬಾಲಿವುಡ್ ನ ಸ್ಟಾರ್ ನಟಿ ಕತ್ರಿನಾ ಕೈಫ್ ರನ್ನು ಕರೆತರುವ ಬಗ್ಗೆ ಸುದ್ದಿ ಬಂದಿತ್ತು. ಇದೀಗ ಫ್ಯಾಂಟಮ್ ಬಹುಭಾಷೆಗಳಲ್ಲಿ ರಿಲೀಸ್ ಆಗಲಿರುವ ಸುದ್ದಿ ಕೇಳಿಬರುತ್ತಿದೆ. ಇದಕ್ಕೂ ಮೊದಲು ಸುದೀಪ್ ಅಭಿನಯದ ಪೈಲ್ವಾನ್ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ರಿಲೀಸ್ ಕಂಡಿತ್ತು. ಒಂದು ವೇಳೆ ಫ್ಯಾಂಟಮ್ ಕೂಡಾ ಬಹುಭಾಷೆಗಳಲ್ಲಿ ಬಿಡುಗಡೆಯಾದರೆ ಇದು ಸುದೀಪ್ ಅಭಿನಯದ ಎರಡನೇ ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ.