Publish Date: Sat, 30 Dec 2017 (08:26 IST)
Updated Date: Sat, 30 Dec 2017 (08:28 IST)
ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರಾ? ಇಂತಹದ್ದೊಂದು ಸುದ್ದಿ ಇದೀಗ ಗಾಂಧಿನಗರದಲ್ಲಿ ಜೋರಾಗಿ ಹರಿದಾಡುತ್ತಿದೆ.
ಕೆಲವು ದಿನಗಳ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಸುದೀಪ್ ಮನೆಗೆ ಭೇಟಿ ನೀಡಿದಾಗಿನಿಂದ ಕಿಚ್ಚನ ರಾಜಕೀಯ ಪ್ರವೇಶದ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇವೆ. ಇದೀಗ ಸ್ವತಃ ದೇವೇಗೌಡರು ಇದಕ್ಕೆ ಸ್ಪಷ್ಟನೆ ನೀಡಿದ್ದು, ಮತ್ತಷ್ಟು ರೆಕ್ಕೆ ಪುಕ್ಕ ಹುಟ್ಟಿಕೊಳ್ಳುವಂತೆ ಮಾಡಿದ್ದಾರೆ.
ಅಂದು ಸುದೀಪ್ ಮನೆಗೆ ಭೇಟಿ ನೀಡಿದ್ದ ಕುಮಾರಸ್ವಾಮಿ ರಾಜಕೀಯಕ್ಕೆ ಆಹ್ವಾನವಿತ್ತಿದ್ದು ನಿಜ. ಆದರೆ ಸುದೀಪ್ ಈ ಬಗ್ಗೆ ಏನನ್ನೂ ಹೇಳಿಲ್ಲ. ಒಂದು ವೇಳೆ ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ದೇವೇಗೌಡರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ