Publish Date: Mon, 31 Jul 2023 (16:04 IST)
Updated Date: Mon, 31 Jul 2023 (16:06 IST)
ಬೆಂಗಳೂರು: ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಇದೇ ವಾರದಿಂದ ಸುದೀಪ್ ಕಿಚ್ಚ46 ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇದಕ್ಕೆ ಮೊದಲು ತಿರುಪತಿ ದೇವರ ದರ್ಶನ ಪಡೆದು ಬಂದಿದ್ದರು. ಇದೇ ವಾರದಿಂದ ಮಹಾಬಲಿಪುರಂನಲ್ಲಿ ವಿಶೇಷ ಸೆಟ್ ನಲ್ಲಿ ಚಿತ್ರೀಕರಣ ನಡೆಯಲಿದೆ.
ನಿರಂತರ ಎರಡು ತಿಂಗಳ ಕಾಲ ಚಿತ್ರೀಕರಣ ನಡೆಯಲಿದೆ. ವಿ ಕ್ರಿಯೇಷನ್ಸ್ ನಿರ್ಮಾಣದ ವಿಜಯ್ ಕಾರ್ತಿಕೇಯನ್ ನಿರ್ದೇಶನದ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.