Select Your Language

Notifications

webdunia
webdunia
webdunia
webdunia

ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಶೀಘ್ರದಲ್ಲೇ ಸೆಟ್ಟೇರಲಿದೆ ಕಿಚ್ಚನ ಬಿಗ್‌ ಬಜೆಟ್‌ ಸಿನಿಮಾ

ಸಂದೇಶ್‌ ಪ್ರೊಡಕ್ಷನ್ಸ್‌  ಜತೆ ಶೀಘ್ರದಲ್ಲೇ ಸೆಟ್ಟೇರಲಿದೆ ಕಿಚ್ಚನ ಬಿಗ್‌ ಬಜೆಟ್‌ ಸಿನಿಮಾ

sampriya

ಬೆಂಗಳೂರು , ಶನಿವಾರ, 1 ಜೂನ್ 2024 (17:54 IST)
Photo By Instagram
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಹಿಟ್‌ ಸಿನಿಮಾಗಳನ್ನು ನೀಡುತ್ತಾ ಬಂದಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆಯ ಮುಂದಿನ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರು ಅಭಿನಯಿಸಲಿದ್ದಾರೆ.

ಆದರೆ ಈ ಬಗ್ಗೆ ಸುದೀಪ್‌ ಆಗಲಿ, ಸಂಸ್ಥೆಯಾಗಲಿ ಅಧಿಕೃತವಾಗಿ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುದೀಪ್‌ ಅವರನ್ನು ಎನ್‌ ಸಂದೇಶ್‌ ಅವರು ಭೇಟಿಯಾಗಿರುವ ಫೋಟೋಗಳು ವೈರಲ್‌ ಆಗಿವೆ.

ಇದೀಗ ಈ ಸುದ್ದಿ ನಿಜವಾಗಲಿದ್ದು, ಶೀಘ್ರದಲ್ಲೇ ಚಿತ್ರ ಸೆಟ್ಟೇರಲಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.

 ಕನ್ನಡ ಚಿತ್ರೋದ್ಯಮಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಈಗಾಗಲೇ ಸದಭಿರುಚಿಯ ಚಿತ್ರಗಳ ಜತೆಗೆ ಬಿಗ್‌ ಬಜೆಟ್‌ ಸಿನಿಮಾಗಳನ್ನು ಕನ್ನಡಕ್ಕೆ ನೀಡಿದೆ. ಕೆಲ ತಿಂಗಳ ಹಿಂದಷ್ಟೇ ಇದೇ ಸಂಸ್ಥೆಯಲ್ಲಿ ತಯಾರಾದ  “ಘೋಸ್ಟ್‌” ಚಿತ್ರ ಬಿಡುಗಡೆಯಾಯಿತು.

ಇದೀಗ ಇದೇ ಸಂದೇಶ್‌ ಪ್ರೊಡಕ್ಷನ್ಸ್‌ ಸಂಸ್ಥೆ, ಮತ್ತೊಂದು ಬಿಗ್‌ ಸಿನಿಮಾವನ್ನು ಕೈಗೆತ್ತಿಕೊಂಡಿದೆ.  ಸದ್ಯಕ್ಕೆ ಕಿಚ್ಚ ಸುದೀಪ್‌ ಸಂದೇಶ್‌ ಪ್ರೊಡಕ್ಷನ್ಸ್‌ ಅಡಿಯಲ್ಲಿ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಈ ಸಿನಿಮಾ ಯಾವಾಗ ಶುರು, ನಿರ್ದೇಶಕರು ಯಾರು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಮಾಪಕರು ಘೋಷಣೆ ಮಾಡಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅನುಷ್ಕಾ ಶರ್ಮಾ ತೂಕದ ಬಗ್ಗೆ ಕಮೆಂಟ್‌ ಮಾಡಿದ್ದಕ್ಕೆ ಗರಂ ಆದ ಅಭಿಮಾನಿಗಳು