Webdunia - Bharat's app for daily news and videos

Install App

ಪತ್ನಿಯೊಂದಿಗೆ ಚಾಮುಂಡಿ ಬೆಟ್ಟಕ್ಕೆ ಕಿಚ್ಚ ಸುದೀಪ್‌ ಭೇಟಿ, ಮುಗಿಬಿದ್ದ ಅಭಿಮಾನಿಗಳು

Sampriya
ಸೋಮವಾರ, 27 ಮೇ 2024 (14:38 IST)
Photo Courtesy X
ಮೈಸೂರು: ಪತ್ನಿ ಪ್ರಿಯಾ ಅವರೊಂದಿಗೆ ಕಿಚ್ಚ ಸುದೀಪ್‌ ಅವರು ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದರು. ನಾಡ ಅದಿದೇವತೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು.

ದೇವಸ್ಥಾನದ ಹೊರಾಂಗಣದಲ್ಲಿ ಕಿಚ್ಚ ಸುದೀಪ್ ನೋಡಲು ಅಭಿಮಾನಿಗಳು ಸಾಗರವೇ ನೆರೆದಿತ್ತು. ಕಿಚ್ಚ ಸುದೀಪ್‌ ಕಂಡೊಡನೆ ಜೈಕಾರ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸುದೀಪ್‌ ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಕಂಪ್ಲೀಟ್‌ ಆಗಿದೆ ಎಂದು ಎಕ್ಸ್‌ ಮೂಲಕ ಮಾಹಿತಿ ಹಂಚಿಕೊಂಡಿದ್ದರು.

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಒಪ್ಪಿಕೊಂಡಿರುವ ಸಿನಿಮಾ ಮ್ಯಾಕ್ಸ್. ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಶೀಘ್ರದಲ್ಲೇ ಈ ಚಿತ್ರದ ಟ್ರೈಲರ್‌ ಕೂಡ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಸಿನಿಮಾದಲ್ಲಿ ಅವರು ಭರ್ಜರಿ ಸಾಹಸಗಳನ್ನ ಮಾಡಿದ್ದಾರೆ. ಸಾಹಸ ನಿರ್ದೇಶಕ ಚೇತನ್ ಡಿಸೋಜಾ ಈ ಸಾಹಸಗಳನ್ನ ಕಂಪೋಸ್ ಮಾಡಿದ್ದಾರೆ. ವಿಶೇಷವಾಗಿ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲಿ ಭರ್ಜರಿ ಆ್ಯಕ್ಷನ್‌ಗಳೇ ಇವೆ ಎನ್ನಲಾಗಿದೆ.

ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮಾಣಿಕ್ಯ ಚಿತ್ರದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments