Select Your Language

Notifications

webdunia
webdunia
webdunia
webdunia

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

Abhina Chakraborty Kiccha Sudeep, Mysore's Chamundi Betta, Bigg Boss contestant Vinay Gowda

Sampriya

ಮೈಸೂರು , ಭಾನುವಾರ, 31 ಆಗಸ್ಟ್ 2025 (12:45 IST)
Photo Credit X
ಮೈಸೂರು: ಸ್ಯಾಂಡಲ್‌ವುಡ್‌ನ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಸೆ.2ರಂದು ಹುಟ್ಟುಹಬ್ಬದ ಸಂಭ್ರಮ. ಅದಕ್ಕೂ ಮುನ್ನ ಅವರು ಪತ್ನಿಯೊಂದಿಗೆ ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಸುದೀಪ್ ದಂಪತಿ ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾ ಪಡೆದರು. ಈ ವೇಳೆ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.   ಸುದೀಪ್‌ ದಂಪತಿ ಅವರೊಂದಿಗೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ, ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. 

ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2ರಂದು ಸುದೀಪ್ ಕೂಡ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸುದೀಪ್ ಅವರು ಅಮ್ಮನ ಹುಟ್ಟು ಹಬ್ಬದ ನೆನಪಿಗೆ ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ ಎಂಬ ಸಾಲಿನೊಂದಿಗೆ ಹಸಿರು ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್​ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸ್ವತಃ ಸುದೀಪ್ ಚಾಲನೆ ನೀಡಿದ್ದರು.

ಸೆಪ್ಟೆಂಬರ್‌ 2ರಂದು ಕಿಚ್ಚ ಸುದೀಪ್‌ ಹುಟ್ಟುಹಬ್ಬ ಇರುವ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆಗೆ ಮುಂದಾಗಿದ್ದಾರೆ. ಆದರೆ ಸುದೀಪ್‌ ಈ ಬಾರಿ ಯಾರೂ ಮನೆಯ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್