ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

Sampriya
ಭಾನುವಾರ, 31 ಆಗಸ್ಟ್ 2025 (12:45 IST)
Photo Credit X
ಮೈಸೂರು: ಸ್ಯಾಂಡಲ್‌ವುಡ್‌ನ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಸೆ.2ರಂದು ಹುಟ್ಟುಹಬ್ಬದ ಸಂಭ್ರಮ. ಅದಕ್ಕೂ ಮುನ್ನ ಅವರು ಪತ್ನಿಯೊಂದಿಗೆ ಮೈಸೂರಿನಲ್ಲಿರುವ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಸುದೀಪ್ ದಂಪತಿ ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾ ಪಡೆದರು. ಈ ವೇಳೆ ಕಿಚ್ಚ ಸುದೀಪ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.   ಸುದೀಪ್‌ ದಂಪತಿ ಅವರೊಂದಿಗೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ, ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. 

ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2ರಂದು ಸುದೀಪ್ ಕೂಡ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ.

ಸುದೀಪ್ ಅವರು ಅಮ್ಮನ ಹುಟ್ಟು ಹಬ್ಬದ ನೆನಪಿಗೆ ಅಮ್ಮನ ಹೆಜ್ಜೆಗೆ ಹಸಿರು ಹೆಜ್ಜೆ ಎಂಬ ಸಾಲಿನೊಂದಿಗೆ ಹಸಿರು ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪಾರ್ಕ್​ನಲ್ಲಿ ಗಿಡ ನೆಡುವ ಮೂಲಕ ಹಸಿರು ಕ್ರಾಂತಿಗೆ ಚಾಲನೆ ನೀಡಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್​ನ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಸ್ವತಃ ಸುದೀಪ್ ಚಾಲನೆ ನೀಡಿದ್ದರು.

ಸೆಪ್ಟೆಂಬರ್‌ 2ರಂದು ಕಿಚ್ಚ ಸುದೀಪ್‌ ಹುಟ್ಟುಹಬ್ಬ ಇರುವ ಹಿನ್ನೆಲೆ ಅಭಿಮಾನಿಗಳು ಸಂಭ್ರಮಾಚರಣೆಗೆ ಮುಂದಾಗಿದ್ದಾರೆ. ಆದರೆ ಸುದೀಪ್‌ ಈ ಬಾರಿ ಯಾರೂ ಮನೆಯ ಹತ್ತಿರ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments