Select Your Language

Notifications

webdunia
webdunia
webdunia
webdunia

ಯಶ್ ನಟನೆಯ ಟಾಕ್ಸಿಕ್‌ ಸಿನಿಮಾಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

Toxic Cinema, Forest Minister Eshwar Khandre, Karnataka Forest Department

Sampriya

ಬೆಂಗಳೂರು , ಮಂಗಳವಾರ, 12 ನವೆಂಬರ್ 2024 (15:24 IST)
Photo Courtesy X
ಬೆಂಗಳೂರು: ನಟ ರಾಕಿಂಗ್ ಸ್ಟಾರ್‌ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಶೂಟಿಂಗ್‌ಗಾಗಿ  ಮರಗಳನ್ನು ಕಡಿದ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲಿಸಿದೆ.

ನ್ಯಾಯಾಲಯದ  ಆದೇಶ ಪಡೆದು ಅರಣ್ಯ ಇಲಾಖೆ ಎಫ್‍ಐಆರ್ ದಾಖಲಿಸಿದೆ. ಈ ಸಂಬಂಧ ಇದೀಗ ಕೆವಿನ್ ಸಂಸ್ಥೆ, ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್, ಹೆಚ್‍ಎಂಟಿ ಜನರಲ್ ಮ್ಯಾನೇಜರ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ಟಾಕ್ಸಿಕ್ ಸಿನಿಮಾದ ಸಲುವಾಗಿ ನೂರಾರು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದ ಹಾಗೇ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸ್ಥಳ ಪರಿಶೀಲನೆ ನಡೆಸಿದ್ದರು. ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮದ ಎಚ್ಚರಿಕೆ ನೀಡಿದ್ದರು. ಈ ಸಂಬಂಧ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಹೆಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟ್‌ಲೈಟ್ ಚಿತ್ರಗಳಿಂದ ಈ ಕೃತ್ಯ ಸ್ಪಷ್ಟವಾಗಿ ಕಾಣುತ್ತಿದೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಅಂಬಿ ಮನೆಗೆ ಮತ್ತೆ ಬಂದ ಅಂಬರೀಶ್: ಮಗುವಿಗೆ ಜನ್ಮವಿತ್ತ ಅವಿವಾ