Webdunia - Bharat's app for daily news and videos

Install App

ಕಾಲಿವುಡ್‌ ನಟ ವಿಶಾಲ್‌ ಆರೋಗ್ಯದಲ್ಲಿ ಮತ್ತೆ ಏರುಪೇರು: ಅಪೋಲೊ ಆಸ್ಪತ್ರೆಗೆ ದಾಖಲು

Sampriya
ಮಂಗಳವಾರ, 7 ಜನವರಿ 2025 (14:17 IST)
Photo Courtesy X
ಚೆನ್ನೈ: ಟಾಲಿವುಡ್‌ ವಿಶಾಲ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈಚೆಗೆ ತಮ್ಮ ಮದಗಜರಾಜ ಚಿತ್ರದ ಪ್ರೋಮೋಷನ್‌ನಲ್ಲಿ ಪಾಲ್ಗೊಂಡಿದ್ದ ಅವರು ತೀವ್ರ ಅಸ್ವಸ್ಥತೆಗೀಡಾಗಿದ್ದರು. ಅವರು ಮೈಕ್ ಹಿಡಿದಿದ್ದ ಕೈಗಳು ತೀವ್ರವಾಗಿ ನಡುಗುತ್ತಿದ್ದವು. ಮಾತುಗಳು ಕೂಡ ತೀವ್ರವಾಗಿ ತೊದಲುತ್ತಿದ್ದವು. ಇದು ವಿಶಾಲ್ ಅವರಿಗೆ ಏನೋ ಆಗಿದೆ ಎಂಬುದನ್ನು ಸಾಬೀತು ಪಡಿಸಿತ್ತು.

ಇದೀಗ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದರಿಂದ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ವಿಶಾಲ್ ಅವರು ಅತಿಯಾದ ಜ್ವರ ಮತ್ತು ನಿಶ್ಯಕ್ತಿಯಿಂದ ಬಳಲುತ್ತಿದ್ದರು. ವೈದ್ಯರ ಸಲಹೆ ಮೇರೆಗೆ ಅವರನ್ನು ಇದೀಗ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಪರೀಕ್ಷಿಸಿದ ವೈದ್ಯರು ವಿಶಾಲ್ ಗೆ ವೈರಲ್ ಫೀವರ್ ಇರುವ ಕುರಿತು ಸ್ಪಷ್ಟನೆ ನೀಡಿದ್ದು ಇದೇ ಕಾರಣಕ್ಕೆ ಅವರು ತೀವ್ರ ನಿಶ್ಯಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಕೂಡ ನಟ ವಿಶಾಲ್ ಆರೋಗ್ಯದ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ವಿಶಾಲ್ ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಮತ್ತು ಕೆಲವು ದಿನಗಳವರೆಗೆ ಸಂಪೂರ್ಣ ಬೆಡ್ ರೆಸ್ಟ್ ಅಗತ್ಯವಿದೆ ಎಂದು ದೃಢಪಡಿಸಿದ್ದಾರೆ. ಇದಲ್ಲದೆ ವಿಶಾಲ್ ಕೆಲವು ದಿನಗಳ ಕಾಲ ವೈದ್ಯಕೀಯ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ವರದಿ ಹೇಳಿದೆ.

ಸುಂದರ್ ಸಿ ನಿರ್ದೇಶನದ ಮದಗಜರಾಜ ಚಿತ್ರದಲ್ಲಿ ವಿಶಾಲ್ ನಾಯಕನಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಖ್ಯಾತ ಹಾಸ್ಯ ಕಲಾವಿದ ಸಂತಾನಂ, ವರಲಕ್ಷ್ಮಿ ಶರತ್‌ಕುಮಾರ್, ಸತೀಶ್, ನಿತಿನ್ ಸತ್ಯ, ಸೋನು ಸೂದ್, ಅಂಜಲಿ ಮತ್ತು ದಿವಂಗತ ನಟರಾದ ಮಣಿವಣ್ಣನ್, ಮನೋಬಾಲಾ, ಮಾಯಿಲ್‌ಸಾಮಿ ಮತ್ತು ಚಿಟ್ಟಿ ಬಾಬು ಕೂಡ ನಟಿಸಿದ್ದಾರೆ. ಇದೇ 12ರಂದು ಚಿತ್ರ ರಿಲೀಸ್‌ ಆಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments