Publish Date: Sat, 26 Sep 2020 (09:55 IST)
Updated Date: Sat, 26 Sep 2020 (09:57 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರು ವಿಧಿವಶರಾದ ಹಿನ್ಬಲೆಯಲ್ಲಿ ಕಾಲಿವುಡ್ ಚಿತ್ರರಂಗ ಸಂತಾಪ ಸೂಚಿಸಿದೆ.
ಸೂಪರ್ ಸ್ಟಾರ್ ರಜನೀಕಾಂತ್ ಅವರು, ನಿಮ್ಮ ಧ್ವನಿ ಮತ್ತು ನಿಮ್ಮ ನೆನಪು ನನ್ನೊಂದಿಗೆ ಶಾಶ್ವತವಾಗಿ ಉಳಿಯಲಿದೆ. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಎಸ್ ಪಿಬಿಯವರು ಮತ್ತು ಅವರ ಧ್ವನಿ ಏಳು ತಲೆಮಾರುಗಳವರೆಗೆ ಶಾಶ್ವತವಾಗಿ ಉಳಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ನಟಿ ನಯನತಾರಾ ಅವರು, ನಿಮ್ಮ ಎಲ್ಲಾ ಸಂಗೀತಕ್ಕಾಗಿ ಧನ್ಯವಾದ. ನಿಮ್ಮ ಧ್ವನಿ ನಮ್ಮೊಂದಿಗೆ ಶಾಶ್ವತವಾಗಿ ಇರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ನಟಿ ಖುಷ್ಬೂ ಅವರು ನೀವು ನಮ್ಮನ್ನು ಬಿಟ್ಟು ಹೋಗಬಾರದಿತ್ತು ಎಂದು ಕಂಬನಿ ಮಿಡಿದಿದ್ದಾರೆ.