Select Your Language

Notifications

webdunia
webdunia
webdunia
webdunia

ಡಿ ಬಾಸ್ ದರ್ಶನ್ ಬರ್ತ್ ಡೇಗೆ ಕ್ರಾಂತಿ ಹಬ್ಬ

ಕ್ರಾಂತಿ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಸಿನಿಮಾ ಈಗ ಮುಂದಿನ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ.

ಈ ಸಿನಿಮಾ ಬಗ್ಗೆ ಹೊಸ ಅಪ್ ಡೇಟ್ ಒಂದು ಬಂದಿದೆ. ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬವಿದ್ದು, ಇದೇ ದಿನ ಪ್ಯಾನ್ ಇಂಡಿಯಾ ಸಿನಿಮಾ ಕ್ರಾಂತಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಲಿದೆ ಎಂಬ ಸುದ್ದಿ ಬಂದಿದೆ.

ಕ್ರಾಂತಿ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ರಚಿತಾ ರಾಂ ಅಭಿನಯಿಸುತ್ತಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್, ಅಚ್ಯುತ್ ಕುಮಾರ್, ಉಮಾಶ್ರೀ, ಸಾಧು ಕೋಕಿಲ, ಮುಖ್ಯಮಂತ್ರಿ ಚಂದ್ರು ಸೇರಿದಂತೆ ಘಟಾನುಘಟಿಗಳ ತಾರಾಗಣವಿದೆ. ಈ ಸಿನಿಮಾದ ಚಿತ್ರೀಕರಣ ಹೈದರಾಬಾದ್, ಬೆಂಗಳೂರಿನಲ್ಲಿ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಾಂತ್ ರೋಣ ರಿಲೀಸ್ ಡೇಟ್ ಬಗ್ಗೆ ಅನುಮಾನಕ್ಕೆ ಸ್ಪಷ್ಟನೆ ನೀಡಿದ ನಿರ್ದೇಶಕ