Webdunia - Bharat's app for daily news and videos

Install App

ಮಂಡ್ಯ ಲೋಕಸಭಾ ರಣಾಂಗಣದ ಎಫೆಕ್ಟ್ ‘ಕುರುಕ್ಷೇತ್ರ’ ಸಿನಿಮಾ ಮೇಲೆ?! ದರ್ಶನ್-ನಿಖಿಲ್ ಸಿನಿಮಾ ಗತಿ ಏನು?

Webdunia
ಬುಧವಾರ, 27 ಮಾರ್ಚ್ 2019 (08:51 IST)
ಮಂಡ್ಯ: ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಮತ್ತು ನಿಖಿಲ್ ಕುಮಾರಸ್ವಾಮಿ ನಡುವಿನ ಸ್ಪರ್ಧೆಯಿಂದ ಇದೀಗ ಸ್ಯಾಂಡಲ್ ವುಡ್ ಎರಡು ಮನೆಯಾಗಿದಂತಾಗಿದೆ.


ಇದರ ನೇರ ಇಫೆಕ್ಟ್ ಆಗಿರುವುದು ಮುನಿರತ್ನ ನಿರ್ಮಾಣದ ‘ಕುರುಕ್ಷೇತ್ರ’ ಸಿನಿಮಾ ಮೇಲೆ ಎಂದರೂ ತಪ್ಪಾಗಲಾರದು. ಕಾಂಗ್ರೆಸ್ ಶಾಸಕರೂ ಆಗಿರುವ ಮುನಿರತ್ನ  ನಿರ್ಮಾಣದ ಕುರುಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ಗೆ ಬೆಂಬಲವಾಗಿ ನಿಂತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಿಖಿಲ್ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ತಮ್ಮ ಪಕ್ಷದ ಮೇಲೆ ನಿಷ್ಠೆ ತೋರಿದ್ದು, ಸುಮಲತಾ ಪರ ನಿಲ್ಲದೇ ನಿಖಿಲ್ ಪರವಾಗಿ ಮಂಡ್ಯದಲ್ಲಿ ಬೆಂಬಲ ಘೋಷಿಸಿದ್ದಾರೆ. ಇತ್ತ ಮುನಿರತ್ನ ಸಂಬಂಧಿಯೂ ಆದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸುಮಲತಾ ಬೆನ್ನಿಗೆ ನಿಂತಿದ್ದಾರೆ.

ಇವರೆಲ್ಲರ ರಾಜಕೀಯ ಜಂಜಾಟದ ನಡುವೆ ಕುರುಕ್ಷೇತ್ರ ಸಿನಿಮಾ ಬಿಡುಗಡೆ ಮತ್ತಷ್ಟು ಕಗ್ಗಂಟಾಗುವ ನಿರೀಕ್ಷೆಯಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಿಖಿಲ್ ಅಭಿನಯಿಸಿರುವ ಕಾರಣಕ್ಕೆ ಕುರುಕ್ಷೇತ್ರ ಸದ್ಯಕ್ಕೆ ಬಿಡುಗಡೆಯಾಗದು. ಆದರೆ ಅದರ ಜತೆಗೆ ಇದೀಗ ರಾಜಕೀಯ ವೈಷಮ್ಯವೂ ಸೇರಿಕೊಂಡಿದ್ದು, ಐತಿಹಾಸಿಕ ಚಿತ್ರದ ಪಾಡು ಏನಾಗಬಹುದು ಎಂದು ಕಾದು ನೋಡಬೇಕಷ್ಟೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ ಹೀಗ್ಯಾಕೆ ಹೇಳಿದ್ದು

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments